Mysore
28
overcast clouds

Social Media

ಗುರುವಾರ, 02 ಜುಲೈ 2026
Light
Dark

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ ನಡೆದಿದೆ.

100 ಅಡಿಯ ಮೇಲೆ ಹಿಟಾಚಿಯಿಂದ ಕ್ಲೀನ್‌ ಮಾಡಲಾಗುತ್ತಿತ್ತು. ಹೊಸ ಕ್ರಷರ್‌ ನಡೆಸಲು ಹಿಟಾಚಿ ಡ್ರೈವರ್‌ ಸ್ಥಳ ಕ್ಲೀನ್‌ ಮಾಡುತ್ತಿದ್ದ. ಈ ವೇಳೆ ಕೆಳಭಾಗದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಘಟನೆಯಲ್ಲಿ ಹಲವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಕ್ರಷರ್‌ ಆನಂದಸ್ವಾಮಿ ಎಂಬುವವರಿಗೆ ಸೇರಿದೆ ಎಂದು ತಿಳಿದುಬಂದಿದ್ದು, ಪೊಲೀಸರು ಮಾಲೀಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

 

Tags:
error: Content is protected !!