ರಾಜ್ಯ

ರೈತರ ಸಮಸ್ಯೆಗಳಿಗಿಂತ ಎರಡು ಮನೆ ಜಗಳ ಮಾಧ್ಯಮಗಳಿಗೆ ಮುಖ್ಯವಾಗಿರುವುದು ದುರಂತ: ಕೆವಿಪಿ

ಕಾರ್ಪೋರೇಟ್ ಶ್ರೀಮಂತರ ಮನೆಯ ವೈಭವಕ್ಕಿಂತ ದುಡಿದು ಬದುಕುವವರ ಬವಣೆಗೆ ಕ್ಯಾಮರಾ ಹಿಡಿಯಿರಿ: ಕೆವಿಪಿ

ಹಾವೇರಿ : ಮಾಧ್ಯಮಗಳಿಗೆ ರೈತರ ಸಮಸ್ಯೆಗಳಿಗಿಂತ ಎರಡು ಮನೆ ಜಗಳ  ಮುಖ್ಯವಾಗಿರುವುದು ದುರಂತ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.

ತಾಲ್ಲೂಕು ಪತ್ರಕರ್ತರ ಸಂಘ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪತ್ರಕರ್ತರ ಸಮ್ಮೇಳನ ಮತ್ತು ಜಿಲ್ಲಾ ಘಟಕ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾರ್ಪೋರೇಟ್ ಶ್ರೀಮಂತರ ಮನೆಯ ವೈಭವಕ್ಕಿಂತ ದುಡಿದು ಬದುಕುವವರ ಬವಣೆಗೆ ಕ್ಯಾಮರಾ ಹಿಡಿಯಿರಿ ಎಂದು ಮಾಧ್ಯಮಗಳಿಗೆ ಕರೆ ನೀಡಿದರು.

ಸ್ವಾತಂತ್ರ್ಯ ಪೂರ್ವದಲ್ಲಿ ಮತ್ತು ಸ್ವಾತಂತ್ರ್ಯದ ಹೊಸ್ತಿಲಲ್ಲಿ ದೇಶದ ಅಭಿವೃದ್ಧಿ ಪತ್ರಿಕೋದ್ಯಮದ ಆದ್ಯತೆ ಆಗಿತ್ತು. ಗಾಂಧಿ, ಅಂಬೇಡ್ಕರ್ ಅವರು ಪತ್ರಿಕೆಗಳನ್ನು ನಡೆಸಿ ನಮ್ಮಂಥಾ ದೇಶಕ್ಕೆ ಯಾವ ರೀತಿಯ ಪತ್ರಿಕೋದ್ಯಮ ಬೇಕು ಎನ್ನುವುದಕ್ಕೆ ಮಾದರಿ ರೂಪಿಸಿಕೊಟ್ಟಿದ್ದಾರೆ. ಟಿಆರ್ ಪಿ ರಭಸದಲ್ಲಿ ಈ ಮಾದರಿಗಳು ಕೊಚ್ಚಿಹೋಗಿವೆ ಎಂದು ಬೇಸರ ವ್ಯಕ್ತಪಡಿಸಿದರು.

ತಂತ್ರಜ್ಞಾನದ ವೇಗ ಕೃತಕ ಬುದ್ದಿಮತ್ತೆಯ ಕಾಲದಲ್ಲಿ ಪತ್ರಿಕಾವೃತ್ತಿ ಹೊಸ ಸವಾಲು ಮತ್ತು ಅವಕಾಶಗಳಿಗೆ ತೆರೆದುಕೊಳ್ಳುತ್ತಿದೆ. ಪತ್ರಕರ್ತರು ಅಷ್ಟೇ ವೇಗದಲ್ಲಿ ತಮ್ಮನ್ನು ತಾವು ಉನ್ನತೀಕರಿಸಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು,

ವಿದ್ಯಾರ್ಥಿಗಳಾದವರು ತಂದೆ ತಾಯಿ ಮಾತು ಕೇಳಬೇಕು. ಮನೆಯೇ ಮೊದಲ ಪಾಠಶಾಲೆ ಎನ್ನುವುದು ಎಷ್ಟು ಅರ್ಥಪೂರ್ಣ ಎನ್ನುವುದನ್ನು ನೋಬೆಲ್ ಪುರಸ್ಕೃತ ವಿಜ್ಞಾನಿ ಐನ್ ಸ್ಟೀನ್ ಅವರ ಬದುಕಿನ ಘಟನೆಗಳನ್ನು ಉದಾಹರಿಸಿ  ಮಾತನಾಡಿದರು.

ಶಾಸಕರಾದ ಶಿವಣ್ಣ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಸೇರಿದಂತೆ ಪತ್ರಕರ್ತರ ಸಂಘದ ಪದಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವೈಭವ್‌ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್‌ : ಸಿಎಸ್‌ಕೆ ವಿರುದ್ಧ ಆರ್‌ಆರ್‌ಗೆ ಗೆಲುವು

ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್‌ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್‌ ಕಿಂಗ್ಸ್‌…

3 hours ago

ಮೈಸೂರು ರೇಸ್ ಕ್ಲಬ್ ಚುನಾವಣೆ; ಸದಸ್ಯರಾಗಿ ಐವರ ಆಯ್ಕೆ

ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…

5 hours ago

ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಹೆದ್ದಾರಿಗಿಲ್ಲ ಪ್ರವೇಶ

ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…

5 hours ago

ಅಮೆರಿಕದೊಂದಿಗೆ ಯಾವುದೇ ನೇರ ಮಾತುಕತೆ ನಡೆದಿಲ್ಲ : ಇರಾನ್‌ ಸ್ಪಷ್ಟನೆ

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…

5 hours ago

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…

6 hours ago

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

7 hours ago