ಕಾರ್ಪೋರೇಟ್ ಶ್ರೀಮಂತರ ಮನೆಯ ವೈಭವಕ್ಕಿಂತ ದುಡಿದು ಬದುಕುವವರ ಬವಣೆಗೆ ಕ್ಯಾಮರಾ ಹಿಡಿಯಿರಿ: ಕೆವಿಪಿ
ಹಾವೇರಿ : ಮಾಧ್ಯಮಗಳಿಗೆ ರೈತರ ಸಮಸ್ಯೆಗಳಿಗಿಂತ ಎರಡು ಮನೆ ಜಗಳ ಮುಖ್ಯವಾಗಿರುವುದು ದುರಂತ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.
ತಾಲ್ಲೂಕು ಪತ್ರಕರ್ತರ ಸಂಘ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪತ್ರಕರ್ತರ ಸಮ್ಮೇಳನ ಮತ್ತು ಜಿಲ್ಲಾ ಘಟಕ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾರ್ಪೋರೇಟ್ ಶ್ರೀಮಂತರ ಮನೆಯ ವೈಭವಕ್ಕಿಂತ ದುಡಿದು ಬದುಕುವವರ ಬವಣೆಗೆ ಕ್ಯಾಮರಾ ಹಿಡಿಯಿರಿ ಎಂದು ಮಾಧ್ಯಮಗಳಿಗೆ ಕರೆ ನೀಡಿದರು.
ಸ್ವಾತಂತ್ರ್ಯ ಪೂರ್ವದಲ್ಲಿ ಮತ್ತು ಸ್ವಾತಂತ್ರ್ಯದ ಹೊಸ್ತಿಲಲ್ಲಿ ದೇಶದ ಅಭಿವೃದ್ಧಿ ಪತ್ರಿಕೋದ್ಯಮದ ಆದ್ಯತೆ ಆಗಿತ್ತು. ಗಾಂಧಿ, ಅಂಬೇಡ್ಕರ್ ಅವರು ಪತ್ರಿಕೆಗಳನ್ನು ನಡೆಸಿ ನಮ್ಮಂಥಾ ದೇಶಕ್ಕೆ ಯಾವ ರೀತಿಯ ಪತ್ರಿಕೋದ್ಯಮ ಬೇಕು ಎನ್ನುವುದಕ್ಕೆ ಮಾದರಿ ರೂಪಿಸಿಕೊಟ್ಟಿದ್ದಾರೆ. ಟಿಆರ್ ಪಿ ರಭಸದಲ್ಲಿ ಈ ಮಾದರಿಗಳು ಕೊಚ್ಚಿಹೋಗಿವೆ ಎಂದು ಬೇಸರ ವ್ಯಕ್ತಪಡಿಸಿದರು.
ತಂತ್ರಜ್ಞಾನದ ವೇಗ ಕೃತಕ ಬುದ್ದಿಮತ್ತೆಯ ಕಾಲದಲ್ಲಿ ಪತ್ರಿಕಾವೃತ್ತಿ ಹೊಸ ಸವಾಲು ಮತ್ತು ಅವಕಾಶಗಳಿಗೆ ತೆರೆದುಕೊಳ್ಳುತ್ತಿದೆ. ಪತ್ರಕರ್ತರು ಅಷ್ಟೇ ವೇಗದಲ್ಲಿ ತಮ್ಮನ್ನು ತಾವು ಉನ್ನತೀಕರಿಸಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು,
ವಿದ್ಯಾರ್ಥಿಗಳಾದವರು ತಂದೆ ತಾಯಿ ಮಾತು ಕೇಳಬೇಕು. ಮನೆಯೇ ಮೊದಲ ಪಾಠಶಾಲೆ ಎನ್ನುವುದು ಎಷ್ಟು ಅರ್ಥಪೂರ್ಣ ಎನ್ನುವುದನ್ನು ನೋಬೆಲ್ ಪುರಸ್ಕೃತ ವಿಜ್ಞಾನಿ ಐನ್ ಸ್ಟೀನ್ ಅವರ ಬದುಕಿನ ಘಟನೆಗಳನ್ನು ಉದಾಹರಿಸಿ ಮಾತನಾಡಿದರು.
ಶಾಸಕರಾದ ಶಿವಣ್ಣ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಸೇರಿದಂತೆ ಪತ್ರಕರ್ತರ ಸಂಘದ ಪದಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ನವದೆಹಲಿ: ಮುಖ್ಯ ಚುನಾವಾಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಿನ್ನೆ ಬೃಹತ್ ಪ್ರತಿಭಟನೆಗೆ ಕರೆ ನೀಡಿತ್ತು. ಈ…
ಮೈಸೂರು: ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ದೇವಿಯ ಕೃಪೆ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…
ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…
ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…