ರಾಜ್ಯ

ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಮೈಸೂರು ವಿದ್ಯಾರ್ಥಿನಿ ದುರಂತ ಸಾವು

ಮೈಸೂರು: ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಚೆನ್ನೈ ಎಕ್ಸ್‌ಪ್ರೆಸ್ ರೈಲು ಹತ್ತುವಾಗ ಆಯಾತಪ್ಪಿ ಕೆಳಗೆ ಬಿದ್ದು ಮೈಸೂರಿನ ಪ್ರತಿಭಾವಂತ ವಿದ್ಯಾರ್ಥಿನಿ ಸಾವಿ ಗೀಡಾಗಿರುವ ದುರಂತ ಬುಧವಾರ(ಡಿ.25) ಸಂಜೆ ಸಂಭವಿಸಿದೆ.

ಮೈಸೂರು ಜಿಲ್ಲಾ ವಕೀಲರ ಸಂಘದ ಮಾಜಿ ಕಾರ್ಯದರ್ಶಿಯೂ ಆದ ಹಿರಿಯ ವಕೀಲ ಉಮೇಶ್‌ ಪುತ್ರಿ ಶ್ರೇಯ(19) ಮೃತಪಟ್ಟ ವಿದ್ಯಾರ್ಥಿನಿ ಯಾಗಿದ್ದು, ಈಕೆ ಮೈಸೂರಿನ ಮಾತಾ ಅಮೃತಾನಂದಮಯಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದರು. ಕಾಲೇಜಿನ ಸಾಂಸ್ಕೃತಿಕ ತಂಡ ದೊಂದಿಗೆ ಚೆನ್ನೈನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಮೈಸೂರಿ ನಿಂದ ಚೆನ್ನೈ ಎಕ್ಸ್‌ಪ್ರೆಸ್‌ನಲ್ಲಿ ತೆರಳುತ್ತಿದ್ದರು.

ರೈಲು ಬೆಂಗಳೂರು ನಿಲ್ದಾಣ ದಲ್ಲಿ ನಿಂತಿದ್ದ ವೇಳೆ ನೀರಿನ ಬಾಟಲಿ ಖರೀದಿಸಲು ಕೆಳಗಿಳಿದ ಶ್ರೇಯ, ಮತ್ತೆ ರೈಲು ಹತ್ತುವ ವೇಳೆ ಆಯಾ ತಪ್ಪಿ ಪ್ಲಾಟ್ ಫಾರ್ಮನಲ್ಲಿ ಬಿದ್ದಿದ್ದಾರೆ. ಈ ವೇಳೆ ತಲೆಗೆ ತೀವ್ರವಾಗಿ ಪೆಟ್ಟು ಬಿದಿದ್ದ ಶ್ರೇಯಾಳನ್ನು ಗಮನಿಸಿದ ಸಹಪಾಠಿಗಳು ತಕ್ಷಣವೇ ರೈಲಿ ನಿಂದ ಇಳಿದು ಆಕೆಯ ಆರೈಕೆಯಲ್ಲಿ ತೊಡಗಿದ್ದರಾದರೂ ಅಷ್ಟರಲ್ಲಿ ಶ್ರೇಯ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಈ ಸಂಬಂಧ ಬೆಂಗಳೂರು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ಮುಂದುವರೆಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

2 hours ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

2 hours ago

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

3 hours ago

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

12 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

12 hours ago