ಮೈಸೂರು: ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಚೆನ್ನೈ ಎಕ್ಸ್‌ಪ್ರೆಸ್ ರೈಲು ಹತ್ತುವಾಗ ಆಯಾತಪ್ಪಿ ಕೆಳಗೆ ಬಿದ್ದು ಮೈಸೂರಿನ ಪ್ರತಿಭಾವಂತ ವಿದ್ಯಾರ್ಥಿನಿ ಸಾವಿ ಗೀಡಾಗಿರುವ ದುರಂತ ಬುಧವಾರ(ಡಿ.25) ಸಂಜೆ ಸಂಭವಿಸಿದೆ.
ಮೈಸೂರು ಜಿಲ್ಲಾ ವಕೀಲರ ಸಂಘದ ಮಾಜಿ ಕಾರ್ಯದರ್ಶಿಯೂ ಆದ ಹಿರಿಯ ವಕೀಲ ಉಮೇಶ್ ಪುತ್ರಿ ಶ್ರೇಯ(19) ಮೃತಪಟ್ಟ ವಿದ್ಯಾರ್ಥಿನಿ ಯಾಗಿದ್ದು, ಈಕೆ ಮೈಸೂರಿನ ಮಾತಾ ಅಮೃತಾನಂದಮಯಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದರು. ಕಾಲೇಜಿನ ಸಾಂಸ್ಕೃತಿಕ ತಂಡ ದೊಂದಿಗೆ ಚೆನ್ನೈನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಮೈಸೂರಿ ನಿಂದ ಚೆನ್ನೈ ಎಕ್ಸ್‌ಪ್ರೆಸ್‌ನಲ್ಲಿ ತೆರಳುತ್ತಿದ್ದರು.
ರೈಲು ಬೆಂಗಳೂರು ನಿಲ್ದಾಣ ದಲ್ಲಿ ನಿಂತಿದ್ದ ವೇಳೆ ನೀರಿನ ಬಾಟಲಿ ಖರೀದಿಸಲು ಕೆಳಗಿಳಿದ ಶ್ರೇಯ, ಮತ್ತೆ ರೈಲು ಹತ್ತುವ ವೇಳೆ ಆಯಾ ತಪ್ಪಿ ಪ್ಲಾಟ್ ಫಾರ್ಮನಲ್ಲಿ ಬಿದ್ದಿದ್ದಾರೆ. ಈ ವೇಳೆ ತಲೆಗೆ ತೀವ್ರವಾಗಿ ಪೆಟ್ಟು ಬಿದಿದ್ದ ಶ್ರೇಯಾಳನ್ನು ಗಮನಿಸಿದ ಸಹಪಾಠಿಗಳು ತಕ್ಷಣವೇ ರೈಲಿ ನಿಂದ ಇಳಿದು ಆಕೆಯ ಆರೈಕೆಯಲ್ಲಿ ತೊಡಗಿದ್ದರಾದರೂ ಅಷ್ಟರಲ್ಲಿ ಶ್ರೇಯ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಈ ಸಂಬಂಧ ಬೆಂಗಳೂರು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ಮುಂದುವರೆಸಿದ್ದಾರೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…