Mysore
24
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಬೆಳಗಾವಿ| ನಿಲ್ದಾಣದ ಬಳಿಯೇ ಹಳಿ ತಪ್ಪಿದ ಗೂಡ್ಸ್‌ ರೈಲು: ತಪ್ಪಿದ ಭಾರೀ ಅನಾಹುತ

ಬೆಳಗಾವಿ: ಇಲ್ಲಿನ ರೈಲು ನಿಲ್ದಾಣದ ಬಳಿ ಗೂಡ್ಸ್‌ ರೈಲೊಂದು ಹಳಿ ತಪ್ಪಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ರೈಲು ನಿಲ್ದಾಣದಿಂದ ಅರ್ಧ ಕಿ.ಮೀ ದೂರದಲ್ಲಿ ಗೂಡ್ಸ್‌ ರೈಲು ಹಳಿ ತಪ್ಪಿದೆ. ಬೆಳಗಾವಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ವೇಳೆ ಹಳಿ ತಪ್ಪಿ ಮೂರು ಬೋಗಿಗಳು ಪಕ್ಕಕ್ಕೆ ಸರಿದಿವೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ರೈಲ್ವೆ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈಲು ಯಾವ ಕಾರಣಕ್ಕೆ ಹಳಿ ತಪ್ಪಿದೆ ಎಂಬ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.

ರೈಲಿನಲ್ಲಿ ಸುಮಾರು 200ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Tags:
error: Content is protected !!