Mysore
23
haze

Social Media

ಶನಿವಾರ, 27 ಡಿಸೆಂಬರ್ 2025
Light
Dark

ರೈಲು ಪ್ರಯಾಣ ದರ ಹೆಚ್ಚಳ | ರಾಜ್ಯ ಬಿಜೆಪಿ ನಾಯಕರ ಮೌನವೇಕೆ : ಸಿ.ಎಂ ಪ್ರಶ್ನೆ

ದಾವಣಗೆರೆ : ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ಪ್ರಶ್ನಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಕೇಂದ್ರ ಸರ್ಕಾರ ರೈಲು ಪ್ರಯಾಣ ದರ ಏರಿಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ದರ ಹೆಚ್ಚಳ ಬಗ್ಗೆ ಬಿಜೆಪಿ ನಾಯಕರು ಮೌನ ವಹಿಸಿರುವುದು ಏಕೆ ಎಂದು ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಹುಬ್ಬಳ್ಳಿಯಲ್ಲಿ ಮರ್ಯಾದೆ ಹತ್ಯೆ | ಕ್ರೂರಿ ತಂದೆಯನ್ನು ಶೂಟ್‌ ಮಾಡಿ ; ಪ್ರಮೋದ್‌ ಮುತಾಲಿಕ್‌ ಆಗ್ರಹ

ಹಿರಿಯೂರು ಬಸ್ ಅಪಘಾತ : ತನಿಖೆ ನಡೆಸಲಾಗುವುದು
ಚಿತ್ರದುರ್ಗದ ಹಿರಿಯೂರು ಬಳಿ ನಡೆದ ಬಸ್ ಮತ್ತು ಟ್ರಕ್ ಅಪಘಾತದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಈ ಅಪಘಾತದಲ್ಲಿ ಟ್ರಕ್ ಚಾಲನ ತಪ್ಪಿರುವುದಾಗಿ ಮೇಲ್ನೋಟಕ್ಕೆ ಕಂಡು ಬರುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಟ್ರಕ್ ವಿಭಜಕವನ್ನು ದಾಟಿ ಬಸ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 4 ಮಹಿಳೆಯರು ಹಾಗೂ ಒಂದು ಮಗು ಹಾಗೂ ಟ್ರಕ್ ಚಾಲಕ ಸಾವಿಗೀಡಾಗಿದ್ದಾರೆ. ಬಸ್ಸುಗಳು ಎಲ್ಲಾ ಸುರಕ್ಷತೆಯ ಕ್ರಮಗಳನ್ನು ಅನುಸರಿಸುವುದು ಅವಶ್ಯಕ. ಅಪಘಾತದ ಬಗ್ಗೆ ತನಿಖೆ ನಡೆಸಲಾಗುವುದು ಎಂದರು.

ಕಾಂಗ್ರೆಸ್ ನ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಲು ಇಂದು ನವದೆಹಲಿಗೆ ತೆರಳುತ್ತಿರುವುದಾಗಿ ತಿಳಿಸಿದರು.

Tags:
error: Content is protected !!