ಮೈಸೂರು : ಕೆ-ಸೆಟ್ ಮತ್ತು ಯುಜಿಸಿ-ನೆಟ್, ಜೆಆರ್‌ಎಫ್ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ನಡೆಸಲಿರುವ ರಾಜ್ಯಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ(ಕೆ-ಸೆಟ್) ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟ್ರಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನ ಸಹಾಯಕರ (ಜೆಆರ್‌ಎಫ್) ಅರ್ಹತಾ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನೀಡಲಾಗುತ್ತದೆ.
ಆಸಕ್ತರು ಮೇ 2 ರೊಳಗಾಗಿ ಹೆಸರು ನೋಂದಾಯಿಸಿಕೊಳ್ಳಬೇಕು. ದೂ.ಸಂ.0821-2515944ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತವಿದ್ಯಾನಿಲಯದ ಕುಲಸಚಿವ ಪ್ರೊ.ಎಸ್.ಕೆ.ನವೀನ್‌ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




