ಬೆಂಗಳೂರು : ಆರ್.ಸಿ.ಬಿ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ಸೇರಿದಂತೆ ಕೆಲ ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿದೆ.
ಈ ಬಗ್ಗೆ ಇಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ, ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ, ನ್ಯಾಯಾಂಗ ತನಿಖೆಗೆ ಆದೇಶಿಸಿದೆ ಎಂದರು.
ಅಮಾನತುಗೊಂಡ ಪೊಲೀಸ್ ಅಧಿಕಾರಿಗಳು….
ಬೆಂಗಳೂರು ನಗರ ಪೊಲೀಸ್ ಕಮಿಷನರ್ : ಬಿ.ದಯಾನಂದ
ಹೆಚ್ಚುವರಿ ಪೊಲೀಸ್ ಆಯುಕ್ತ : ವಿಕಾಸ್ ಕುಮಾರ್
ಕೇಂದ್ರ ಡಿಸಿಪಿ : ಟಿ. ಶೇಖರ್
ಕಬ್ಬನ್ ಪಾರ್ಕ್ ಎಸಿಪಿ : ಬಾಲಕೃಷ್ಣ
ಕಬ್ಬನ್ ಪಾರ್ಕ್ ಪೊಲೀಸ್ ಇನ್‌ಸ್ಪೆಕ್ಟರ್ : ಗಿರೀಶ್ ಮತ್ತು ಸಿಬ್ಬಂದಿ





