Mysore
32
broken clouds

Social Media

ಸೋಮವಾರ, 13 ಏಪ್ರಿಲ 2026
Light
Dark

ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಪ್ರಹ್ಲಾದ್‌ ಜೋಶಿ ಆಗ್ರಹ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್‌ಐಆರ್‌ ದಾಖಲಾಗಿದೆ. ಸಿದ್ದರಾಮಯ್ಯ ಅವರು ಅಧಿಕಾರದಲ್ಲಿದ್ದುಕೊಂಡೇ ತನಿಖೆ ಎದುರಿಸುತ್ತಿದ್ದಾರೆ. ಹಾಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಎಂದು ಆಗ್ರಹಿಸಿದರು.

ಇನ್ನು ಆಪರೇಷನ್‌ ಕಮಲದ ಆರೋಪ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನಾವು ಯಾವ ಶಾಸಕರಿಗೂ 100 ಕೋಟಿ ರೂಪಾಯಿ ಆಫರ್‌ ಮಾಡಿಲ್ಲ. ಕಾಂಗ್ರೆಸ್‌ನವರು ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

Tags:
error: Content is protected !!