ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದೆ. ಸಿದ್ದರಾಮಯ್ಯ ಅವರು ಅಧಿಕಾರದಲ್ಲಿದ್ದುಕೊಂಡೇ ತನಿಖೆ ಎದುರಿಸುತ್ತಿದ್ದಾರೆ. ಹಾಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಎಂದು ಆಗ್ರಹಿಸಿದರು.
ಇನ್ನು ಆಪರೇಷನ್ ಕಮಲದ ಆರೋಪ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನಾವು ಯಾವ ಶಾಸಕರಿಗೂ 100 ಕೋಟಿ ರೂಪಾಯಿ ಆಫರ್ ಮಾಡಿಲ್ಲ. ಕಾಂಗ್ರೆಸ್‌ನವರು ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಬೆಳಗಾವಿ : ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಿಟ್ಟ 50 ಸಾವಿರ ಕೋಟಿ ಅನುದಾನ ದುರುಪಯೋಗವಾಗಿದೆ ಎಂದು…
ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಸಿಎಂ ಬದಲಾವಣೆ…
ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ ನಿರ್ದೇಶಕರ…
ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…
ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…
ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ…