ಬೆಂಗಳೂರು : ರೋಹಿಣಿ ಸಿಂಧೂರಿ, ಡಿ.ರೂಪ ಸೇರಿದಂತೆ ಹಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ.
ಐಎಎಸ್ ಅಧಿಕಾರಿ ಶೆಟ್ಟೆನ್ನವರ್ ಎಸ್.ಬಿ ಅವರನ್ನು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ನೇಮಕ ಮಾಡಲಾಗಿದೆ.
ಕೃಷಿ ಇಲಾಖೆ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದ ಡಾ.ಎನ್.ವಿ ಪ್ರಸಾದ್ ಅವರನ್ನು ಬಿಡುಗಡೆಗೊಳಿಸಲಾಗಿದೆ.
ಹುದ್ದೆ ನಿರೀಕ್ಷೆಯಲ್ಲಿದ್ದ ಐಎಎಸ್ ಅಧಿಕಾರಿ ಅಕ್ರಂ ಪಾಷ ಅವರನ್ನು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.
ಇದನ್ನು ಓದಿ:- ಮೈಸೂರು | ಅಂಬೇಡ್ಕರ್ ಬ್ಯಾನರ್ ತೆರವು : ವಿದ್ಯಾರ್ಥಿಗಳಿಂದ ಮುಂದುವರೆದ ಪ್ರತಿಭಟನೆ
ಇನ್ನೂ ಕರ್ನಾಟಕ ರೇಷ್ಮೆ ಮಾರುಕಟ್ಟೆ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಐಪಿಎಸ್ ಅಧಿಕಾರಿ ಡಿ.ರೂಪ ಅವರನ್ನು ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ವರ್ಗಾಯಿಸಲಾಗಿದೆ.