ರಾಜ್ಯ

ರೋಹಿಣಿ ಸಿಂಧೂರಿ, ಡಿ.ರೂಪ ಸೇರಿ ಹಲವು ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ರೋಹಿಣಿ ಸಿಂಧೂರಿ, ಡಿ.ರೂಪ ಸೇರಿದಂತೆ ಹಲವು ಐಎಎಸ್‌ ಹಾಗೂ ಐಪಿಎಸ್‌ ಅಧಿಕಾರಿಗಳನ್ನು ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ.

ಐಎಎಸ್‌ ಅಧಿಕಾರಿ ಶೆಟ್ಟೆನ್ನವರ್‌ ಎಸ್‌.ಬಿ ಅವರನ್ನು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ನೇಮಕ ಮಾಡಲಾಗಿದೆ.

ಕೃಷಿ ಇಲಾಖೆ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದ ಡಾ.ಎನ್‌.ವಿ ಪ್ರಸಾದ್‌ ಅವರನ್ನು ಬಿಡುಗಡೆಗೊಳಿಸಲಾಗಿದೆ.

ಹುದ್ದೆ ನಿರೀಕ್ಷೆಯಲ್ಲಿದ್ದ ಐಎಎಸ್‌ ಅಧಿಕಾರಿ ಅಕ್ರಂ ಪಾಷ ಅವರನ್ನು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.

ಇದನ್ನು ಓದಿ:- ಮೈಸೂರು | ಅಂಬೇಡ್ಕರ್‌ ಬ್ಯಾನರ್‌ ತೆರವು : ವಿದ್ಯಾರ್ಥಿಗಳಿಂದ ಮುಂದುವರೆದ ಪ್ರತಿಭಟನೆ

ಇನ್ನೂ ಕರ್ನಾಟಕ ರೇಷ್ಮೆ ಮಾರುಕಟ್ಟೆ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಐಪಿಎಸ್‌ ಅಧಿಕಾರಿ ಡಿ.ರೂಪ ಅವರನ್ನು ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ವರ್ಗಾಯಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

4 mins ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

6 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

6 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

7 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

8 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

14 hours ago