ಯಾದಗಿರಿ: ಯಾದಗಿರಿ ಠಾಣೆ ಪಿಎಸ್‌ಐ ಪರಶುರಾಮ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಎಂದು ಆಗ್ರಹಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯದ ಕಾಂಗ್ರೆಸ್ ಆಡಳಿತದಲ್ಲಿ ದಲಿತರು ಸುರಕ್ಷಿತವಾಗಿಲ್ಲ ಎಂದು ಆರೋಪಿಸಿದರು.
ಯಾದಗಿರಿಯಲ್ಲಿ ಮೃತಪಟ್ಟ ಪಿಎಸ್ಐ ಪರಶುರಾಮ್ ಅವರ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲ್ಲೂಕಿನ ಸೋಮನಾಳ ಗ್ರಾಮಕ್ಕೆ ಭೇಟಿ ನೀಡಿ ಮೃತ ಪರಶುರಾಮ್ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ, ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ದಲಿತ ಅಧಿಕಾರಿಗಳ ಸಾವಾಗುತ್ತಿದೆ. ವಾಲ್ಮೀಕಿ ನಿಗಮದ ಚಂದ್ರಶೇಖರ್ ನಂತರ ಈಗ ಪಿಎಸ್‌ಐ ಪರಶುರಾಮ್ ಸಾವಾಗಿದೆ. ನಮ್ಮ ಕ್ಷೇತ್ರದಲ್ಲಿ ದಲಿತರು ಇರಬಾರದು ಎಂದು ಯಾದಗಿರಿ ಶಾಸಕರು ಹೇಳಿದ್ದಾರೆಂದು ಪರಶುರಾಮ್ ಕುಟುಂಬ ಆರೋಪಿಸಿದೆ. ಅಂಬೇಡ್ಕರ್ ಬರೆದ ಸಂವಿಧಾನದಲ್ಲಿಯೇ ನಾವೆಲ್ಲರೂ ಬದುಕುತ್ತಿದ್ದರೂ ಈ ರೀತಿಯ ಹೇಯ ಕೃತ್ಯ ನಡೆಯುತ್ತಿದೆ ಎಂದು ಬೇಸರಿಸಿದರು.
ದಲಿತ ಕುಟುಂಬದ ಹೆಣ್ಣುಮಗಳಿಗೆ (ಪರಶುರಾಮ್ ಪತ್ನಿ) ನ್ಯಾಯ ಒದಗಿಸಲು ಹೋರಾಟ ಮಾಡುತ್ತಿದ್ದೇವೆ. ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಹಾಲಪ್ಪ ಆಚಾರ್, ರಾಜ್ಯ ಉಪಾಧ್ಯಕ್ಷರಾದ ರಾಜು ಗೌಡ, ವಿಧಾನ ಸಭಾ ವಿರೋಧ ಪಕ್ಷ ಮುಖ್ಯ ಸಚೇತಕರಾದ ದೊಡ್ಡನಗೌಡ ಹೆಚ್ ಪಾಟೀಲ್ ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…