ಬೆಳಗಾವಿ: ರಾಜ್ಯದಲ್ಲಿ ತತ್ಕಾಲ್ ಯೋಜನೆಯಡಿ 68 ಸಾವಿರ ರೈತರ ಕೃಷಿ ಪಂಪ್ಸೆಟ್ಗಳಿಗೆ ಟ್ರಾನ್ಸ್ಫಾರ್ಮರ್ ಒದಗಿಸಲಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ವಿಧಾನಸಭೆಗೆ ತಿಳಿಸಿದರು.
ಗುರುವಾರ ಪ್ರಶ್ನೋತ್ತರ ವೇಳೆಯಲ್ಲಿ ಜಾ.ದಳ ಸದಸ್ಯ ಎಂ.ವಿ.ವೀರಭದ್ರಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ತತ್ಕಾಲ್ ಯೋಜನೆಯಡಿ ವಿದ್ಯುತ್ ಸಂಪರ್ಕ ಪಡೆಯಲು ರೈತರು ಹತ್ತು ಸಾವಿರ ರೂ. ಪಾವತಿಸಬೇಕಿದೆ. ಆದರೆ, ವಿದ್ಯುತ್ ಕಂಪೆನಿಗಳು ಒಂದೂವರೆ ಲಕ್ಷ ರೂ. ವೆಚ್ಚ ಭರಿಸಬೇಕು ಎಂದರು.
ರಾಜ್ಯದಲ್ಲಿ ೨೦೧೪ ರೈತರಿಗೆ ತತ್ಕಾಲ್ ಯೋಜನೆಯಡಿ ಟ್ರಾನ್ಸ್ಫಾರ್ಮರ್ ಒದಗಿಸಬೇಕಾಗಿದ್ದು, ಹಣಕಾಸಿನ ಲಭ್ಯತೆ ಆಧಾರದ ಮೇಲೆ ಶೀಘ್ರವಾಗಿ ಒದಗಿಸುವ ಭರವಸೆ ನೀಡಿದರು. ಅಕ್ರಮ ಕೃಷಿ ಪಂಪ್ಸೆಟ್ಗಳನ್ನು ಸಕ್ರಮಗೊಳಿಸುವ ಯೋಜನೆ ಮುಂದುವರಿದಿದೆ. ಮಧುಗಿರಿ ಕ್ಷೇತ್ರದಲ್ಲಿ ೨೦೧೪ರಿಂದ ೨೦೨೨ರ ನವೆಂಬರ್ವರೆಗೆ ತತ್ಕಾಲ್ಜಯೋನೆಯಡಿ ೬೬೬ ರೈತರು ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಕೋರಿ ಅರ್ಜಿ ಸಲ್ಲಿಸಿದ್ದರು.
ಈಗಾಗಲೇ ೫೩೨ ರೈತರ ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಬಾಕಿ ಉಳಿದಿರುವ ೧೩೪ ರೈತರ ಪಂಪ್ಸೆಟ್ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕಾಗಿದ್ದು, ಮೂಲಸೌಕರ್ಯ ರಚಿಸಿಕೊಂಡು ಜ್ಯೇಷ್ಠತೆ ಆಧಾರದ ಮೇಲೆ ಪರಿವರ್ತಕ ಒದಗಿಸಿ ವಿದ್ಯುತ್ ಸಂರ್ಪಕ ಕಲ್ಪಿಸಲಾಗುವುದು ಎಂದು ಹೇಳಿದರು.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಹಳೇ ಪಿಂಚಣಿ ಯೋಜನೆ ಜಾರಿ ಇಲ್ಲ: ಮಾಧುಸ್ವಾಮಿ
Next Article ಫೆ.23ರಿಂದ ಮಾ.10ರವರೆಗೆ NET ಪರೀಕ್ಷೆ