ಹೊಸದಿಲ್ಲಿ : ಮುಂಬರುವ ಜನಗಣತಿಯೊಂದಿಗೆ ಜಾತಿ ಗಣತಿಯನ್ನು ನಡೆಸಲು ಕೇಂದ್ರ ಸಂಪುಟ ನಿರ್ಧರಿದ್ದು, ಇದು ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ ನಿರ್ಧಾರ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬಣ್ಣಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮುಂಬರುವ ಜನಗಣತಿ ಜೊತೆಯಲ್ಲಿಯೇ ಜಾತಿ ಗಣತಿಯನ್ನೂ ನಡೆಸುವ ಮಹತ್ವದ ನಿರ್ಧಾರವನ್ನು ಮೋದಿಯವರ ನೇತೃತ್ವದಲ್ಲಿ ಕೈಗೊಳ್ಳಲಾಗಿದೆ. ಅವರ ಕ್ರಿಯಾಶೀಲ ನಾಯಕತ್ವದಲ್ಲಿ ಇದು ಐತಿಹಾಸಿಕ ಮತ್ತು ದೂರದೃಷ್ಟಿಯ ನಿರ್ಧಾರವಾಗಿದೆ. ಜಾತಿ ಗಣತಿಯು 1931ರ ನಂತರ ಇದೇ ಮೊದಲ ಬಾರಿಗೆ ಮುಂಬರುವ ರಾಷ್ಟ್ರೀಯ ಜನಗಣತಿಯ ಭಾಗವಾಗಲಿದೆ ಎಂಬುದು ಗಮನಾರ್ಹ ಎಂದಿದ್ದಾರೆ.
ಈ ಮಹತ್ವದ ಹೆಜ್ಜೆಯು ಭಾರತವು ಅಧಿಕೃತ, ವೈಜ್ಞಾನಿಕ ಮತ್ತು ಪಾರದರ್ಶಕವಾದ ಜಾತಿ ದತ್ತಾಂಶ ಹೊಂದಲಿದೆ. ಕೇವಲ ರಾಜಕೀಯ ಪ್ರೇರಿತ ರಾಜ್ಯ ಮಟ್ಟದ ಸಮೀಕ್ಷೆಗಳು ವಿಶ್ವಾಸಾರ್ಹತೆ, ಏಕರೂಪತೆ ಹೊಂದಿರುವುದಿಲ್ಲ ಎಂಬುದು ನನ್ನ ಸ್ಪಷ್ಟ ಅಭಿಪ್ರಾಯ ಎಂದು ಅವರು ಹೇಳಿದ್ದಾರೆ.
ಈ ದಿಟ್ಟ ಕ್ರಮದೊಂದಿಗೆ ಪ್ರಧಾನಿ ಮೋದಿ ಅವರು ಸಮಗ್ರ ಆಡಳಿತ ಮತ್ತು ದತ್ತಾಂಶ ಚಾಲಿತ ನೀತಿ ನಿರೂಪಣೆ ಬಗ್ಗೆ ಹೊಂದಿರುವ ತಮ್ಮ ಅಚಲ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ. ಅಲ್ಲದೇ, ಈ ಗಣತಿಯು ಕಲ್ಯಾಣ ಕಾರ್ಯಕ್ರಮಗಳನ್ನು ಬಲಗೊಳಿಸುತ್ತದೆ, ಸಾಮಾಜಿಕ ನ್ಯಾಯವನ್ನು ಇನ್ನಷ್ಟು ಖಚಿತಪಡಿಸುತ್ತದೆ ಹಾಗೂ ಸರ್ವರಿಗೂ ಸಮಾನ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.
ರಾಷ್ಟ್ರದ ಹಿತದೃಷ್ಟಿಯಿಂದ ಈ ನಿರ್ಣಾಯಕ ಮತ್ತು ದೂರದೃಷ್ಟಿಯ ನಿರ್ಧಾರಕ್ಕಾಗಿ ಪ್ರಧಾನಮಂತ್ರಿಯವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಈ ನಿರ್ಧಾರವನ್ನು ನಾನು, ನಮ್ಮ ಪಕ್ಷವು ಸ್ವಾಗತಿಸುತ್ತದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.
ಹನೂರು : ಶನಿವಾರ ಮಧ್ಯರಾತ್ರಿ ಎರಡು ಗಂಟೆ ವೇಳೆಯಲ್ಲಿ ಯಾರೋ ಆಸಾಮಿಗಳು ಮಾರಕಾಸ್ತ್ರಗಳನ್ನು ಹಿಡಿದು ಐದಾರು ಜನರು ಓಡಾಡುತ್ತಿರುವ ದೃಶ್ಯ…
ಹುಲ್ಲಹಳ್ಳಿ : ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಭಾಗದ ಮೊತ್ತ ಗ್ರಾಮದಲ್ಲಿ ಭಾನುವಾರ ಸಂಜೆ ಚಿರತೆ ದಾಳಿ ಮಾಡಿ ಎರಡು ಮೇಕೆಯನ್ನು…
ಹನೂರು : ತಾಲೂಕಿನ ಹೊಗೇನಕಲ್ ಫಾಲ್ಸ್‌ನ ನೀರಿನಲ್ಲಿ ಈಜಾಡುತ್ತಿದ್ದ ವೇಳೆ ವ್ಯಕ್ತಿಯೋರ್ವ ನೀರಿನ ಸುಳಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಭಾನುವಾರ…
ಬೆಂಗಳೂರು : ಪ್ರಯೋಗ ಶಾಲಾ ತಾಂತ್ರಿಕ ವಲಯದಲ್ಲಿ ಸೂಕ್ತ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಲಾವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದ ನಾಲ್ಕೂವರೆ ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದ್ದು, ಈ ಘಟನೆ ನಗರವನ್ನು ಬೆಚ್ಚಿಬೀಳಿಸಿದೆ.…
ವಾಷಿಂಗ್ಟನ್ : ಅಮೆರಿಕ ತನ್ನ ಮೇಲೆ ಮಾಡುತ್ತಿರುವ ದಾಳಿಗೆ ಪ್ರತಿಯಾಗಿ ಇರಾನ್, ಇಸ್ರೇಲ್ ಮತ್ತು ಗಲ್ಫ್ ದೇಶಗಳಲ್ಲಿನ ಅಮೆರಿಕದ ಮಿಲಿಟರಿ…