Mysore
22
clear sky

Social Media

ಬುಧವಾರ, 28 ಜನವರಿ 2026
Light
Dark

3 ವರ್ಷಕ್ಕಿಂತ ಹೆಚ್ಚಿನ ಅವಧಿ ಒಂದೇ ಕಡೆ ಇರುವ ನೌಕರರ ವರ್ಗಾವಣೆಗೆ ಕೆಎಸ್‌ಆರ್‌ಟಿಸಿಗೆ ಸಾರಿಗೆ ಇಲಾಖೆ ಸೂಚನೆ

big shocking for ksrtc transport unions

ಬೆಂಗಳೂರು: ಕೆಎಸ್‌ಆರ್‌ಟಿಸಿ ಆಡಳಿತಕ್ಕೆ ವೇಗ ನೀಡುವ ಉದ್ದೇಶದೊಂದಿಗೆ ಒಂದೇ ಶಾಖೆಯಲ್ಲಿ ಮೂರು ವರ್ಷಗಳಿಗಿಂತ ಹೆಚ್ಚಿನ ಅವಧಿವರೆಗೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳುವಂತೆ ಕೆಎಸ್‌ಆರ್‌ಟಿಸಿಗೆ ಸಾರಿಗೆ ಇಲಾಖೆ ಸೂಚನೆ ನೀಡಿದೆ.

ಕೆಎಸ್‌ಆರ್‌ಟಿಸಿಯ ವಿಭಾಗಗಳು, ಘಟಕಗಳಲ್ಲಿ ಹಲವು ಸಿಬ್ಬಂದಿ ಮೂರು ವರ್ಷಗಳಿಗಿಂತ ಹೆಚ್ಚಿನ ಅವಧಿ ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿರುವ ಬಗ್ಗೆ ದೂರುಗಳು ಬಂದಿವೆ.

ಇದನ್ನು ಓದಿ: ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಪೆಟ್ರೋಲ್‌ ಟ್ಯಾಂಕರ್‌ ನಡುವೆ ಅಪಘಾತ

ಹೀಗಾಗಿ ಆಡಳಿತದ ದೃಷ್ಟಿಯಿಂದ ಮೂರು ವರ್ಷಗಳಿಗಿಂತ ಹೆಚ್ಚು ಕಾಲ ಒಂದೇ ಶಾಖೆ ಅಥವಾ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಬೇರೆ ಕಡೆಗೆ ವರ್ಗಾವಣೆ ಮಾಡಬೇಕು.

ಇದರೊಂದಿಗೆ ನಿಗಮಗಳಲ್ಲಿ ಚಾಲ್ತಿಯಲ್ಲಿರುವ ಸುತ್ತೋಲೆ, ನಿಯಮಗಳ ಪ್ರಕಾರ ಕ್ರಮ ಕೈಗೊಂಡು ಆಡಳಿತ ವರ್ಗವನ್ನು ಚುರುಕುಗೊಳಿಸಲು ಕ್ರಮ ವಹಿಸಬೇಕು. ಈ ಬಗ್ಗೆ ಕೈಗೊಂಡ ಕ್ರಮಗಳ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಲಾಗಿದೆ.

Tags:
error: Content is protected !!