ksrtc
ಬೆಂಗಳೂರು : ಮುಂದಿನ ಮಾರ್ಚ್ ತಿಂಗಳ 2ರೊಳಗೆ ಸರ್ಕಾರ ತಮ್ಮ ಬೇಡಿಕೆ ಈಡೇರಿಸಬೇಕೆಂದು ಗಡುವು ನೀಡಿರುವ ಸಾರಿಗೆ ನೌಕರರು, ಶುಕ್ರವಾರದಿಂದ ರಾಜ್ಯದಾದ್ಯಂತ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ. ಇದರಿಂದ ನಾಳೆಯಿಂದ ರಾಜ್ಯದಾದ್ಯಂತ ಎಂದಿನಂತೆ ಬಸ್ ಸಂಚಾರ ಸ್ಥಿತಿಯಲ್ಲಿ ಇರಲಿದ್ದು, ಬಸ್‌ಗಳಸೇವೆಯಲ್ಲಿ ವ್ಯತ್ಯಯ ಉಂಟಾಗಬಹುದೆಂಬ ಆತಂಕದಲ್ಲಿದ್ದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ನೆಮ್ಮದಿಯ ನಿಟ್ಟಿಸಿರು ಬಿಟ್ಟಿದ್ದಾರೆ.
38ತಿಂಗಳ ವೇತನ ಹಿಂಬಾಕಿ ಬಿಡುಗಡೆ ಸೇರಿದಂತೆ ಕೆಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕೆಎಸ್ಆರ್‌ಟಿಸಿ, ವಾಯುವ್ಯ, ಈಶಾನ್ಯ ಮತ್ತು ಬಿಎಂಟಿಸಿ ಸೇರಿದಂತೆ ಒಟ್ಟು ನಾಲ್ಕು ನಿಗಮಗಳ ಸಾರಿಗೆ ನೌಕರರು ಶುಕ್ರವಾರದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮುಷ್ಕರ ನಡೆಸಲು ತೀರ್ಮಾನಿಸಿದ್ದರು. ಗುರುವಾರ ಸಾರಿಗೆ ನೌಕರರು ಹಾಗೂ ವಿವಿಧ ಸಾರಿಗೆ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಕೊನೆಗೆ ಸರ್ಕಾರದ ಪರವಾಗಿ ಮಧ್ಯಪ್ರವೇಶ ಮಾಡಿದ ಸಾರಿಗೆ ಇಲಾಖೆ ವ್ಯವಸ್ಥಾಪಕ ನಿರ್ದೇಶಕ ಅಕ್ರಂಪಾಶ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳ ಜೊತೆ ದಿನಪೂರ್ತಿ ನಡೆಸಿದ ಮಾತುಕತೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಮಾರ್ಚ್ 2ರ ವರೆಗೆ ಪ್ರತಿಭಟನೆಯನ್ನು ಮುಂದೂಡುವ ತೀರ್ಮಾನವನ್ನು ತೆಗೆದುಕೊಳ್ಳಲಾಯಿತು.
ಈಗ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುವುದರಿಂದ ಮುಷ್ಕರವನ್ನು ಕೈಬಿಟ್ಟು ಭರವಸೆ ಈಡೇರಿಕೆಗೆ ಮಾರ್ಚ್ 2ರ ಹೊಸಗಡುವು ನೀಡಲಾಗಿದೆ. ಅಷ್ಟರೊಳಗೆ ಸರ್ಕಾರ ತಮ್ಮ ಬೇಡಿಕೆ ಈಡೇರಿಸದಿದ್ದರೆ, ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಅಹೋರಾತ್ರಿ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿಯೂ ಕ್ರಿಯಾ ಸಮಿತಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
ಬಳಿಕ ವೇದಿಕೆ ಮೇಲೆ ತೀರ್ಮಾನ ಪ್ರಕಟಿಸಿದ ಜಂಟಿ ಕ್ರಿಯಾ ಸಮಿತಿ ಸಂಚಾಲಕ ಜಯದೇವರಾಜ್ ಅರಸ್, ನಮ್ಮ ಬೇಡಿಕೆ ಈಡೇರಿಕೆ ಸಂಬಂಧ ಸರ್ಕಾರ ಸ್ಪಂದಿಸಿದೆ. ಆದರೆ ನಮ್ಮ ಹೋರಾಟ ನಿಲ್ಲುವುದಿಲ್ಲ. 38 ತಿಂಗಳ ಹಿಂಬಾಕಿ ಹಾಗೂ ಎಷ್ಟು ವೇತನ ಹೆಚ್ಚಳ ಮಾಡಬೇಕು ಎಂಬುದರ ಕುರಿತು ಶೀಘ್ರದಲ್ಲಿ ಸಭೆ ಕರೆದು ಇತ್ಯರ್ಥಪಡಿಸಲಾಗುವುದು. ನೌಕರರ ಹಿತದೃಷ್ಟಿಯಿಂದ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗುತ್ತಿದೆ. ಮಾರ್ಚ್ 2ರೊಳಗೆ ಸಭೆ ಕರೆದು ಸಮಸ್ಯೆ ಈಡೇರಿಸದಿದ್ದರೆ ಹೋರಾಟ ಮುಂದುವರೆಸಲಾಗುವುದು ಎಂದು ಹೇಳಿದರು.
ನೌಕರರಿಂದ ಹೈಡ್ರಾಮಾ
ಜಂಟಿ ಕ್ರಿಯಾ ಸಮಿತಿ ಮುಖಂಡರಿಗೆ ಮುತ್ತಿಗೆ ಹಾಕಿದ ಸಾರಿಗೆ ನೌಕರರು, ಘೋಷಣೆ ಕೂಗಿದರು. ನಿವೃತ್ತ ಸಾರಿಗೆ ನೌಕರರೇ ಪ್ರತಿಭಟನೆಯಲ್ಲಿ ಹೆಚ್ಷಿನ ಸಂಖ್ಯೆಯಲ್ಲಿ ಭಾಗಿಯಾಗಿ, ಮುಖಂಡರ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದರು.
ಸರ್ಕಾರಕ್ಕೆ ಇನ್ನೆಷ್ಟು ದಿನ ಅವಕಾಶ ಕೊಡ್ತೀರಿ? ಆಗಲ್ಲ ಅದೆಲ್ಲ ಅಗಲ್ಲ ಎಂದು ವಿರೋಧದ ಘೋಷಣೆ ಕೂಗಿದರು.
ಬೇಡಿಕೆ ಈಡೇರಿಕೆ ಬಗ್ಗೆ ಸರ್ಕಾರಕ್ಕೆ ಡೆಡ್‌ಲೈನ್ ನೀಡಿದ್ದು, ಮಾರ್ಚ್ 2ರವರೆಗೆ ಬೇಡಿಕೆ ಈಡೇರಿಸುವಂತೆ ಮನವಿ ಮಾಡಲಾಗಿದೆ. ಅಲ್ಲಿವರೆಗೆ ಬೇಡಿಕೆ ಈಡೇರದಿದ್ದರೆ, ಮಾರ್ಚ್ 2ರಿಂದ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ನೌಕರರ ಪ್ರಮುಖ ಬೇಡಿಕೆಗಳು ಏನು?
ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…
ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್ ಕಣಿವೆಯಲ್ಲಿ…
ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್ ಆಸ್ಪತ್ರೆಗೆ ದಾಖಲಾಗಿದ್ದ ಶರದ್ ಪವಾರ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಶರದ್ ಪವಾರ್…
ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…
ಹಾಸನ: ಮೂವರು ಇಟಿಎಫ್ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…