ರಾಜ್ಯ

ಎಸ್ಮಾ ಜಾರಿಗೂ ಬಗ್ಗದ ಸಾರಿಗೆ ನೌಕರರು: ಆಗಸ್ಟ್.‌5ರಿಂದ ಮುಷ್ಕರ ಫಿಕ್ಸ್‌

ಹುಬ್ಬಳ್ಳಿ: ರಾಜ್ಯ ಸರ್ಕಾರ ಎಸ್ಮಾ ಜಾರಿಗೊಳಿಸಿದ ಬೆನ್ನಲ್ಲೇ ಅಖಿಲ ಕರ್ನಾಟಕ ಸಾರಿಗೆ ನೌಕರ ಮಹಾಮಂಡಲ ಮಹತ್ವದ ಸಭೆ ನಡೆಸಿದ್ದು, ರಾಜ್ಯ ಸರ್ಕಾರಕ್ಕೆ ನೋಟಿಸ್‌ ಮೂಲಕ ಎಚ್ಚರಿಕೆ ನೀಡಿದೆ.

ಹುಬ್ಬಳ್ಳಿಯಲ್ಲಿ ಸಭೆ ನಡೆಸಿರುವ ಅಖಿಲ ಕರ್ನಾಟಕ ಸಾರಿಗೆ ನೌಕರರ ಮಹಾಮಂಡಲವು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಸರ್ಕಾರ ಸಾರಿಗೆ ನೌಕರ ಸಂಘದ ಜೊತೆ ಮಾತುಕತೆ ನಡೆಸದಿದ್ದರೆ ಮುಷ್ಕರ ನಡೆಸುವುದು ಖಚಿತ ಎಂದು ತಿಳಿಸಿದೆ.

ಈ ಬಗ್ಗೆ ಸರ್ಕಾರಕ್ಕೆ ನೋಟಿಸ್‌ ಕೂಡ ನೀಡಲಾಗಿದ್ದು, ರಾಜ್ಯ ಸರ್ಕಾರ ಸಾರಿಗೆ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮಾತುಕತೆ ನಡೆಸಿ ಚರ್ಚೆ ನಡೆಸಬೇಕು. ಇಲ್ಲವಾದಲ್ಲಿ ಆಗಸ್ಟ್.‌5ರಿಂದ ರಾಜ್ಯಾದ್ಯಂತ ಒಂದೇ ಒಂದು ಬಸ್‌ ಕೂಡ ರಸ್ತೆಗೆ ಇಳಿಯಲ್ಲ. ಇದು ಖಚಿತ, ಎಲ್ಲಾ ಸಾರಿಗೆ ನಿಗಮಗಳ ನೌಕರರು ಆಗಸ್ಟ್.‌5ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ ಎಂದು ಎಚ್ಚರಿಕೆ ನೀಡಿದೆ.

ಆಂದೋಲನ ಡೆಸ್ಕ್

Recent Posts

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

5 mins ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

15 mins ago

ಮಲೆ ಮಹದೇಶ್ವರ ಬೆಟ್ಟ: ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಿದ ಮಹಾರಥೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ  ಮಹೋತ್ಸವದ ಅಂಗವಾಗಿ…

21 mins ago

ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು: ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದು

ಇಸ್ಲಾಮಾಬಾದ್:‌ ಇರಾನ್‌, ಅಮೇರಿಕಾ-ಇಸ್ರೇಲ್‌ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.‌23ರಂದು…

3 hours ago

ಯುಗಾದಿ ಸಂಭ್ರಮ: ಓಂಕಾರೇಶ್ವರ ದೇವಾಲಯದಲ್ಲೂ ಬೇವು ಬೆಲ್ಲ ವಿತರಣೆ

ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…

3 hours ago

ಟಿ.ನರಸೀಪುರ| ಯುಗಾದಿ ಸಂಭ್ರಮ: ತ್ರಿವೇಣಿ ಸಂಗಮಕ್ಕೆ ಹರಿದುಬಂದ ಭಕ್ತಸಾಗರ

ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…

4 hours ago