Mysore
26
overcast clouds

Social Media

ಭಾನುವಾರ, 10 ಮೇ 2026
Light
Dark

ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ವಿಚಾರ: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು.!

ramalinga reddy

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪವಾಗಿದೆ.

ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿದ್ದು, ಸಾರಿಗೆ ಇಲಾಖೆ ನಾಲ್ಕು ನಿಗಮಗಳಲ್ಲಿ ಒಂದು ಲಕ್ಷ ಸಿಬ್ಬಂದಿ ಇದ್ದಾರೆ. ನಾಲ್ಕು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಆಗುತ್ತದೆ. ಕೊರೊನಾ ಸಮಯದಲ್ಲಿ ನೌಕರರ ವೇತನ ಪರಿಷ್ಕರಣೆ ಆಗಿರಲಿಲ್ಲ. ಕಳೆದ 2023ರಲ್ಲಿ ಸಿಬ್ಬಂದಿ ವೇತನ ಪರಿಷ್ಕರಣೆ ಆಗಿತ್ತು.

ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆಯ ಆದೇಶದಲ್ಲಿ ಗೊಂದಲವಿತ್ತು. ಬಜೆಟ್‌ನಲ್ಲೂ ಹಣ ಇಟ್ಟಿರಲಿಲ್ಲ. ಈ ಬಗ್ಗೆ ಸಂಘಟನೆಗಳು ಹೋರಾಟ ನಡೆಸಿವೆ. ಸಭೆ ಮಾಡಿದ್ದೇವೆ. ಅಧಿವೇಶನ ಮುಗಿದ ನಂತರ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.

Tags:
error: Content is protected !!