ಬೆಂಗಳೂರು : 38 ತಿಂಗಳ ವೇತನ ಬಾಕಿ ಹಣ ನೀಡಬೇಕು ಎನ್ನುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್‌ಆರ್‌ಟಿಸಿಯ ನಾಲ್ಕೂ ಸಾರಿಗೆ ನಿಗಮಗಳ ನೌಕರರು ಗುರುವಾರ ಮತ್ತು ಶುಕ್ರವಾರ ಕರ್ನಾಟಕದಾದ್ಯಂತ ಮುಷ್ಕರ ನಡೆಸುವುದಕ್ಕೆ ಮುಂದಾಗಿದ್ದಾರೆ. ಇದರಿಂದ ರಾಜ್ಯದಲ್ಲಿ ಗುರುವಾರ ಬಸ್ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.
ಬಸ್‌ಗಳ ಸಂಚಾರ ಎಂದಿನಂತೆ ಇರಲಿದೆ. ಆದರೆ, ನೌಕರರು ಕೆಲಸಕ್ಕೆ ಹಾಜರಾಗದಿದ್ದರೆ, ಬಸ್‌ಗಳ ಓಡಾಟದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ವೇತನ ಹಿಂಬಾಕಿ ಬಿಡುಗಡೆ ಹಾಗೂ ವೇತನ ಪರಿಷ್ಕರಣೆ ಮಾಡಬೇಕು ಎಂದು ಸಾರಿಗೆ ನೌಕರರು ಆಗ್ರಹಿಸಿದ್ದಾರೆ.
ಸಂಜೆ 4 ಗಂಟೆವರೆಗೆ ಸರ್ಕಾರಕ್ಕೆ ಡೆಡ್‌ಲೈನ್ ನೀಡಲಾಗಿದೆ. ಬೇಡಿಕೆ ಸಂಬಂಧ ಸರ್ಕಾರದಿಂದ ಅಧಿಕೃತ ನಿರ್ಧಾರ ಬಾರದಿದ್ದರೆ ಬಂದ್ ಮಾಡುವುದಾಗಿ ಸಾರಿಗೆ ನೌಕರರು ಎಚ್ಚರಿಸಿದ್ದಾರೆ. ಗುರುವಾರ ಸಂಜೆ ಬಳಿಕ ಬಸ್ ಸಂಚಾರ ನಿಲ್ಲಿಸಲು ನೌಕರರು ನಿರ್ಧರಿಸಿದ್ದಾರೆ.
ಆದರೆ ಮುಷ್ಕರಕ್ಕಿಳಿಯುವ ಸಾರಿಗೆ ನೌಕರರಿಗೆ ಕೆಎಸ್‌ಆರ್‌ಟಿಸಿ ಶಿಸ್ತು ಕ್ರಮದ ಎಚ್ಚರಿಕೆ ನೀಡಿದೆ. ಕೆಲಸಕ್ಕೆ ಹಾಜರಾಗದಿದ್ದರೆ ನೋ ಪೇಮೆಂಟ್. ನೌಕರರು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಸೂಚನೆ ನೀಡಿದೆ, ಪ್ರತಿಭಟನೆಯಲ್ಲಿ ಭಾಗಿಯಾದರೆ ಸೇವಾ ನಿಯಮದ ಅನ್ವಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಕೆಎಸ್‌ಆರ್‌ಟಿಸಿ ಎಂಡಿ ಅಕ್ರಮ್ ಪಾಷಾ ಎಚ್ಚರಿಕೆ ನೀಡಿದ್ದಾರೆ.
ಸಾರಿಗೆ ನೌಕರರ ಸಂಘಗಳ ಒಕ್ಕೂಟದ ಮುಖಂಡರಾಗಿದ್ದ ಎಚ್.ವಿ.ಅನಂತ ಸುಬ್ಬರಾವ್ ಅವರ ನಿಧನದ ಹಿನ್ನೆಲೆಯಲ್ಲಿ ಕಳೆದ ಬಾರಿ ಬೆಂಗಳೂರು ಚಲೋ ಮುಂದೂಡಿಕೆ ಮಾಡಲಾಗಿತ್ತು. ಆದರೆ, ಈ ಬಾರಿ ಮುಷ್ಕರದಿಂದ ಹಿಂದೆ ಸರಿಯುವುದಿಲ್ಲ ಎಂದು ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಹೇಳಿದೆ.
ಈ ಬಾರಿ ಭಾರೀ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ವೇತನ ಪರಿಷ್ಕರಣೆ ಹಾಗೂ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಲ್ಲಿ ಕರ್ನಾಟಕ ಸರ್ಕಾರವು ವಿಫಲವಾಗಿದೆ ಎಂದು ನೌಕರರು ಆರೋಪಿಸಿದ್ದಾರೆ. ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯಿಂದ ಬೆಂಗಳೂರು ಚಲೋಗೆ ಕರೆ ನೀಡಲಾಗಿದೆ.
ಸಾರಿಗೆ ನೌಕರರ ಬೇಡಿಕೆಗಳಿಗೆ ಕರ್ನಾಟಕ ಸರ್ಕಾರವು ಸ್ಪಂದಿಸುತ್ತಿಲ್ಲ ಎನ್ನುವುದು ಸಾರಿಗೆ ನೌಕರರ ಆರೋಪವಾಗಿದೆ. 2025ರ ಆಗಸ್ಟ್ ತಿಂಗಳಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದರು. ಆದರೆ, ಸರ್ಕಾರ ಮಧ್ಯಪ್ರವೇಶ ಮಾಡಿ ಭರವಸೆ ನೀಡಿದ್ದ ಕಾರಣಕ್ಕಾಗಿ, ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶದ ಮೇರೆಗೆ ಅಂದು ಸಾರಿಗೆ ನೌಕರರು ಮುಷ್ಕರ ಮುಂದೂಡಿದ್ದರು.
ಬೇಡಿಕೆಗಳು ಏನು?
ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…
ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…
ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…
ಹನೂರು : ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಬುಧವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ…
ನವದೆಹಲಿ: ಭಾರತ್ ಜೋಡೋ ಯಾತ್ರೆಯ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತೀಯ ಸೇನೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ…
ಮೈಸೂರು : ನಗರದಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಎಂಡಿಎ) ರಚಿಸಿರುವ ನಿವೇಶನಗಳನ್ನು ತೆರವುಗೊಳಿಸಿ ದೊಡ್ಡಕೆರೆ ಮತ್ತು ಲಿಂಗಾಂಬುಧಿ ಕೆರೆಯನ್ನು ಪುನರುಜ್ಜೀವನಗೊಳಿಸಬೇಕು ಎಂದು…