ರಾಜ್ಯ

ನಾಳೆ ಸಾರಿಗೆ ಮುಷ್ಕರ : ಕೆಎಸ್‌ಆರ್‌ಟಿಸಿ ಬಸ್‌ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : 38 ತಿಂಗಳ ವೇತನ ಬಾಕಿ ಹಣ ನೀಡಬೇಕು ಎನ್ನುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್‌ಆರ್‌ಟಿಸಿಯ ನಾಲ್ಕೂ ಸಾರಿಗೆ ನಿಗಮಗಳ ನೌಕರರು ಗುರುವಾರ ಮತ್ತು ಶುಕ್ರವಾರ ಕರ್ನಾಟಕದಾದ್ಯಂತ ಮುಷ್ಕರ ನಡೆಸುವುದಕ್ಕೆ ಮುಂದಾಗಿದ್ದಾರೆ. ಇದರಿಂದ ರಾಜ್ಯದಲ್ಲಿ ಗುರುವಾರ ಬಸ್ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ಬಸ್‌ಗಳ ಸಂಚಾರ ಎಂದಿನಂತೆ ಇರಲಿದೆ. ಆದರೆ, ನೌಕರರು ಕೆಲಸಕ್ಕೆ ಹಾಜರಾಗದಿದ್ದರೆ, ಬಸ್‌ಗಳ ಓಡಾಟದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ವೇತನ ಹಿಂಬಾಕಿ ಬಿಡುಗಡೆ ಹಾಗೂ ವೇತನ ಪರಿಷ್ಕರಣೆ ಮಾಡಬೇಕು ಎಂದು ಸಾರಿಗೆ ನೌಕರರು ಆಗ್ರಹಿಸಿದ್ದಾರೆ.

ಸಂಜೆ 4 ಗಂಟೆವರೆಗೆ ಸರ್ಕಾರಕ್ಕೆ ಡೆಡ್‌ಲೈನ್ ನೀಡಲಾಗಿದೆ. ಬೇಡಿಕೆ ಸಂಬಂಧ ಸರ್ಕಾರದಿಂದ ಅಧಿಕೃತ ನಿರ್ಧಾರ ಬಾರದಿದ್ದರೆ ಬಂದ್ ಮಾಡುವುದಾಗಿ ಸಾರಿಗೆ ನೌಕರರು ಎಚ್ಚರಿಸಿದ್ದಾರೆ. ಗುರುವಾರ ಸಂಜೆ ಬಳಿಕ ಬಸ್ ಸಂಚಾರ ನಿಲ್ಲಿಸಲು ನೌಕರರು ನಿರ್ಧರಿಸಿದ್ದಾರೆ.

ಆದರೆ ಮುಷ್ಕರಕ್ಕಿಳಿಯುವ ಸಾರಿಗೆ ನೌಕರರಿಗೆ ಕೆಎಸ್‌ಆರ್‌ಟಿಸಿ ಶಿಸ್ತು ಕ್ರಮದ ಎಚ್ಚರಿಕೆ ನೀಡಿದೆ. ಕೆಲಸಕ್ಕೆ ಹಾಜರಾಗದಿದ್ದರೆ ನೋ ಪೇಮೆಂಟ್. ನೌಕರರು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಸೂಚನೆ ನೀಡಿದೆ, ಪ್ರತಿಭಟನೆಯಲ್ಲಿ ಭಾಗಿಯಾದರೆ ಸೇವಾ ನಿಯಮದ ಅನ್ವಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಕೆಎಸ್‌ಆರ್‌ಟಿಸಿ ಎಂಡಿ ಅಕ್ರಮ್ ಪಾಷಾ ಎಚ್ಚರಿಕೆ ನೀಡಿದ್ದಾರೆ.

ಸಾರಿಗೆ ನೌಕರರ ಸಂಘಗಳ ಒಕ್ಕೂಟದ ಮುಖಂಡರಾಗಿದ್ದ ಎಚ್.ವಿ.ಅನಂತ ಸುಬ್ಬರಾವ್ ಅವರ ನಿಧನದ ಹಿನ್ನೆಲೆಯಲ್ಲಿ ಕಳೆದ ಬಾರಿ ಬೆಂಗಳೂರು ಚಲೋ ಮುಂದೂಡಿಕೆ ಮಾಡಲಾಗಿತ್ತು. ಆದರೆ, ಈ ಬಾರಿ ಮುಷ್ಕರದಿಂದ ಹಿಂದೆ ಸರಿಯುವುದಿಲ್ಲ ಎಂದು ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಹೇಳಿದೆ.

ಈ ಬಾರಿ ಭಾರೀ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ವೇತನ ಪರಿಷ್ಕರಣೆ ಹಾಗೂ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಲ್ಲಿ ಕರ್ನಾಟಕ ಸರ್ಕಾರವು ವಿಫಲವಾಗಿದೆ ಎಂದು ನೌಕರರು ಆರೋಪಿಸಿದ್ದಾರೆ. ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯಿಂದ ಬೆಂಗಳೂರು ಚಲೋಗೆ ಕರೆ ನೀಡಲಾಗಿದೆ.

ಸಾರಿಗೆ ನೌಕರರ ಬೇಡಿಕೆಗಳಿಗೆ ಕರ್ನಾಟಕ ಸರ್ಕಾರವು ಸ್ಪಂದಿಸುತ್ತಿಲ್ಲ ಎನ್ನುವುದು ಸಾರಿಗೆ ನೌಕರರ ಆರೋಪವಾಗಿದೆ. 2025ರ ಆಗಸ್ಟ್ ತಿಂಗಳಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದರು. ಆದರೆ, ಸರ್ಕಾರ ಮಧ್ಯಪ್ರವೇಶ ಮಾಡಿ ಭರವಸೆ ನೀಡಿದ್ದ ಕಾರಣಕ್ಕಾಗಿ, ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶದ ಮೇರೆಗೆ ಅಂದು ಸಾರಿಗೆ ನೌಕರರು ಮುಷ್ಕರ ಮುಂದೂಡಿದ್ದರು.

 

ಬೇಡಿಕೆಗಳು ಏನು?

  • ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಹಣ ತಕ್ಷಣವೇ ಬಿಡುಗಡೆ
  • 2024ರ ಜ.1ರಿಂದ ಅನ್ವಯವಾಗುವಂತೆ ನೂತನ ವೇತನ ಶ್ರೇಣಿ ಜಾರಿ
  • ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರಿ ನೌಕರರಿಗೆ ಸರಿ ಸಮಾನವಾದ ವೇತನ
  • ಕೆಲಸದ ಅವಧಿಯಲ್ಲಿ ಅಧಿಕಾರಿಗಳಿಂದ ಕಾರ್ಮಿಕರಿಗೆ ಆಗುತ್ತಿರುವ ಕಿರುಕುಳ ತಪ್ಪಿಸುವುದು
ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

33 seconds ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

4 hours ago