ಬೆಂಗಳೂರು: ವಿವಿಧ ಬೇಡಿಕೆಗಳಿಗಾಗಿ ಆಗ್ರಹಿಸಿ ಜಂಟಿ ಕ್ರಿಯಾ ಸಮಿತಿ ಡಿ. 31 ರಿಂದ ಕರೆ ನೀಡಿದ್ದ ಸಾರಿಗೆ ಮುಷ್ಕರವನ್ನು ಹಿಂಪಡೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಮಹತ್ವದ ಸಭೆ ಬೆನ್ನಲ್ಲೇ ಮುಷ್ಕಕ ಹಿಂಪಡೆದಿದ್ದಾರೆ. ಹೀಗಾಗಿ ಡಿ.31ರಂದು ಸಾರಿಗೆ ಸಂಸ್ಥೆ ಬಸ್ಗಳು ಎಂದಿನಂತೆ ರಸ್ತೆಗಿಳಿಯಲಿವೆ.
38 ತಿಂಗಳ ಬಾಕಿ ಹಣ ಬಿಡುಗಡೆ ಮಾಡಬೇಕು ಮತ್ತು 2024ರ ಜನವರಿಯಿಂದ ವೇತನ ಹೆಚ್ಚಳ ಮಾಡಬೇಕು ಅನ್ನೋ ಎರಡು ಪ್ರಮುಖ ಬೇಡಿಕೆಗಳೊಂದಿಗೆ, ಅನಂತ್ ಸುಬ್ಬರಾವ್ ನೇತೃತ್ವದ ಜಂಟಿ ಕ್ರಿಯಾ ಸಮಿತಿ ಡಿಸೆಂಬರ್ 31 ರ ಮಂಗಳವಾರ ಬೆಳಿಗ್ಗೆ 6 ರಿಂದ ಕೆಎಸ್ಆರ್‌ಟಿಸಿ, ಬಿಎಂಟಿಸಿಯ ಸೇರಿದಂತೆ ನಾಲ್ಕು ನಿಗಮದ ಬಸ್ಸುಗಳನ್ನು ನಿಲ್ಲಿಸಿ ಮುಷ್ಕರ ಮಾಡಲು ಸಿದ್ದತೆ ಮಾಡಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ನೆನ್ನೆ ಸಿಎಂ ಸಿದ್ದರಾಮಯ್ಯ ಜೊತೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮತ್ತು ಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆ ನಡೆಸಲಾಯಿತು.
ಈ ಸಭೆಯಲ್ಲಿ ನೌಕರರ ಬೇಡಿಕೆಗಳನ್ನು ಸಿಎಂ ಗಮನಕ್ಕೆ ತರಲಾಗಿತ್ತು. ಸಭೆ ಬಳಿಕ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ನೌಕರರ ಬೇಡಿಕೆಯನ್ನು ಸಿಎಂ ಜೊತೆ ಚರ್ಚೆ ಮಾಡಿದ್ದೇನೆ. 11 ಸಾವಿರ ನೌಕರರಿಗೆ ಬಾಕಿಯಿದ್ದ 220 ಕೋಟಿ ಬಿಡುಗಡೆ ಮಾಡಿದ್ದಾರೆ, ಮತ್ತೆ ಎರಡು ಸಾವಿರ ಕೋಟಿ ರೂ. ಸಿಎಂ ಬಿಡುಗಡೆ ಮಾಡಿದ್ದಾರೆ. ಆ ಹಣ ಬಂದರೆ ಸಮಸ್ಯೆ ಪರಿಹಾರ ಆಗುತ್ತದೆ. ವೇತನ ಪರಿಷ್ಕರಣೆ ಬಗ್ಗೆ ಕೂಡ ಸಿಎಂ ಗೆ ಹೇಳಿದ್ದೇವೆ. ಫೆಬ್ರವರಿಯಲ್ಲಿ ಬಜೆಟ್ ಬರಲಿದೆ. ಆಗ ಅನುದಾನ ನೀಡಿ ಅಂತ ಬೇಡಿಕೆ ಇಟ್ಟಿದ್ದೇನೆ. ಸಂಕ್ರಾಂತಿ ಬಳಿಕ ಸಮಸ್ಯೆ ಬಗೆಹರಿಯಲಿದೆ ಎಂದಿದ್ದಾರೆ. ಅಲ್ಲದೇ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ್ ಸುಬ್ಬರಾವ್ ಮುಷ್ಕರ ವಾಪಸ್ಸು ಪಡೆದುಕೊಂಡಿರುವುದಾಗಿ ತಿಳಿಸಿದ್ದಾರೆ.
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…
ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…