ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು ಮತ್ತೆ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ.
ಈ ಹಿನ್ನೆಲೆಯಲ್ಲಿ ಡಿಸೆಂಬರ್.31ರಿಂದ ಸಾರಿಗೆ ಮುಷ್ಕರಕ್ಕೆ ಈಗಾಗಲೇ ಸಾರಿಗೆ ನೌಕರರ ಹಿರಿಯ ಮುಖಂಡ ಅನಂತ ಸುಬ್ಬರಾವ್ ಕರೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಡಿಸೆಂಬರ್.9ರಿಂದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಅಂದು ಸಾರಿಗೆ ನೌಕರರು ಬೆಳಗಾವಿ ಚಲೋ ನಡೆಸುವ ಮೂಲಕ ಸರ್ಕಾರಕ್ಕೆ ಬಿಸಿಮುಟ್ಟಿಸಲಿದ್ದಾರೆ. ಬಳಿಕ ಈ ಬಗ್ಗೆ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ನೋಟಿಸ್ ನೀಡಲಾಗುತ್ತದೆ.
ಒಟ್ಟು ಆರು ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ಘೋಷಿಸಿದ್ದು, ಸಾರಿಗೆ ನೌಕರರ ಬೇಡಿಕೆಗಳನ್ನು ಸರ್ಕಾರ ನಿರ್ಲಕ್ಷ್ಯ ಮಾಡಿದರೆ ಸಾರಿಗೆ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಮೂಲಕ ಹೊಸ ವರ್ಷ ಆಚರಣೆಗೆ ದೂರದ ಊರಿಗೆ ಹೋಗಬೇಕಾದ ಪ್ರಯಾಣಿಕರಿಗೆ ಸಾರಿಗೆ ನೌಕರರು ಬಿಗ್ ಶಾಕ್ ನೀಡಿದ್ದಾರೆ.
ಸಾರಿಗೆ ನೌಕರರ ಬೇಡಿಕೆ ಈಡೇರುವವರೆಗೂ ಮುಷ್ಕರವನ್ನು ಕೈಬಿಡಲ್ಲ ಎಂದು ಎಚ್ಚರಿಕೆ ನೀಡಲಾಗಿದ್ದು, ಈ ಬಗ್ಗೆ ಸರ್ಕಾರ ಈಗಿನಿಂದಲೇ ಎಚ್ಚೆತ್ತುಕೊಳ್ಳಬೇಕಿದೆ.