Mysore
36
few clouds

Social Media

ಗುರುವಾರ, 09 ಏಪ್ರಿಲ 2026
Light
Dark

ಏಪ್ರಿಲ್‌ನಿಂದ ವೇತನ ಪರಿಷ್ಕರಣೆಗೆ ಒಪ್ಪಿದರೂ ತಿರಸ್ಕಾರ: ಮತ್ತೆ ಪ್ರತಿಭಟನೆಗೆ ಮುಂದಾದ ಸಾರಿಗೆ ನೌಕರರು

big shocking for ksrtc transport unions

ಬೆಂಗಳೂರು: ರಾಜ್ಯ ಸಾರಿಗೆ ನೌಕರರು ಸರ್ಕಾರದ ವಿರುದ್ಧ ಸೆಡ್ಡು ಹೊಡೆದಿದ್ದು, ಮತ್ತೆ ಪ್ರತಿಭಟನೆ, ಹೋರಾಟಕ್ಕೆ ಮುಂದಾಗಿದ್ದಾರೆ.

38 ತಿಂಗಳ ವೇತನ ಹಿಂಬಾಕಿ ಹಾಗೂ 2024ರ ಜನವರಿಯಿಂದ ವೇತನ ಪರಿಷ್ಕರಣೆಗೆ ಆಗ್ರಹಿಸಿ ಮತ್ತೆ ಹೋರಾಟಕ್ಕೆ ನಿರ್ಧರಿಸಿದ್ದಾರೆ.

ಸರ್ಕಾರವು 26 ತಿಂಗಳ ಹಿಂಬಾಕಿ ಮತ್ತು 2025 ಏಪ್ರಿಲ್‌ನಿಂದ ಪರಿಷ್ಕರಣೆಗೆ ಒಪ್ಪಿದ್ದರೂ, ನೌಕರರು ಇದನ್ನು ತಿರಸ್ಕರಿಸಿದ್ದಾರೆ. ಏಪ್ರಿಲ್.‌8ರಿಂದ ಚಿತ್ರದುರ್ಗದಿಂದ ಬೆಂಗಳೂರಿನ ಫ್ರೀಡಂಪಾರ್ಕ್‌ವರೆಗೆ ಪಾದಯಾತ್ರೆ ನಡೆಸಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.

ಸರ್ಕಾರದ ಈ ನಿರ್ಧಾರಕ್ಕೆ ಒಪ್ಪದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮದ ನೌಕಕರು 38 ತಿಂಗಳ ವೇತನ ಹಿಂಬಾಕಿ 1970 ಕೋಟಿ ರೂ ಬಿಡುಗಡೆ ಮಾಡಲೇಬೇಕು ಮತ್ತು 2024 ಜನವರಿಯಿಂದಲೇ ಹೊಸ ವೇತನ ಒಪ್ಪಂದ ಮಾಡಬೇಕೆಂದು ಪಟ್ಟು ಹಿಡಿದಿದ್ದಾರೆ.

 

Tags:
error: Content is protected !!