ಹುಬ್ಬಳ್ಳಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನೌಕರರು 2020 ಡಿಸೆಂಬರ್ ಹಾಗೂ 2021ರಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಇದೀಗ ಮತ್ತೆ ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಾರಿಗೆ ನೌಕರರು ಸಜ್ಜಾಗಿದ್ದಾರೆ.
ಸಮಾನ ವೇತನ, ಸರ್ಕಾರಿ ನೌಕರರೆಂದು ಪರಿಗಣನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೆರಿಕೆಗಾಗಿ ಸಾರಿಗೆ ನೌಕರರು ಮುಷ್ಕರ ನಡೆಸಿದ್ದರು.
ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿ ಅಂದಿನ ಸರ್ಕಾರ ಭರವಸೆಗಳನ್ನು ಕೊಟ್ಟು ಕೈತೊಳೆದುಕೊಂಡಿತ್ತು. ಆದರೆ ಈವರೆಗೂ ಸಾರಿಗೆ ಸಿಬ್ಬಂದಿಗಳ 6 ಬೇಡಿಕೆಗಳು ಈಡೇರಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಹೋರಾಟಕ್ಕೆ ಸಜ್ಜಾಗಿದ್ದಾರೆ.
ಬೆಂಗಳೂರು ಚಲೋ ಮೂಲಕ ಅಹೋರಾತ್ರಿ ಅನಿರ್ಧಿಷ್ಟಾವದಿ ಧರಣಿ ನಡೆಸಲು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಮಾರ್ಚ್ 4ರಂದು ಬೆಂಗಳೂರು ಚಲೋ ಹಮ್ಮಿಕೊಂಡಿದ್ದು, ಸರ್ಕಾರಕ್ಕೆ ಬಿಸಿ ಮುಟ್ಟಿಸಲಿದ್ದಾರೆ.