ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಭೈರತಿ ಬಸವರಾಜುಗೆ ಸಂಕಷ್ಟ ಎದುರಾಗಿದ್ದು, ಬಂಧನದ ಅಗತ್ಯವಿದೆ ಎಂದು ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬಂಧನದಿಂದ ರಕ್ಷಣೆ ನೀಡಿದ್ದ ಆದೇಶದ ತೆರವಿಗೆ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ವಿಚಾರಣೆ ವೇಳೆ ಮಾಜಿ ಸಚಿವ ಭೈರತಿ ಬಸವರಾಜು ಸುಳ್ಳು ಹೇಳಿದ್ದಾರೆ. ಪ್ರಕರಣದಲ್ಲಿ ಸುಳ್ಳು ಸಾಕ್ಷಿಗಳನ್ನು ನೀಡಲಾಗಿದ್ದು, ಅವರನ್ನು ಬಂಧಿಸಬೇಕು ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಲಾಗಿದೆ.
ಇದನ್ನು ಓದಿ : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ: ಮಾಜಿ ಸಚಿವ ಭೈರತಿ ಬಸವರಾಜ್‌ಗೆ ಬಿಗ್ ರಿಲೀಫ್
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರಿಗೆ ಕಳೆದ ಕೆಲ ದಿನಗಳ ಹಿಂದೆ ಹೈಕೋರ್ಟ್‌ನಿಂದ ಮಧ್ಯಂತರ ರಿಲೀಫ್ ಸಿಕ್ಕಿತ್ತು. ನ್ಯಾಯಮೂರ್ತಿ ಅರುಣ್ ಅವರ ಪೀಠದಿಂದ ಬಂದ ಆದೇಶವು ಪ್ರಕರಣಕ್ಕೆ ಹೊಸ ತಿರುವು ನೀಡಿತ್ತು.
ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ಶಾಸಕ ಭೈರತಿ ಬಸವರಾಜು ವಿರುದ್ಧ ತಕ್ಷಣ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಸೂಚನೆ ನೀಡಿತ್ತು. ಜೊತೆಗೆ ಅವರು ತನಿಖೆಗೆ ಸಹಕಾರ ನೀಡಬೇಕು ಎಂದು ಆದೇಶ ನೀಡಿತ್ತು. ಆದರೀಗ ಭೈರತಿ ಬಸವರಾಜುಗೆ ಸಂಕಷ್ಟ ಎದುರಾಗಿದ್ದು, ಬಂಧನದ ಅಗತ್ಯವಿದೆ ಎಂದು ಮತ್ತೆ ಕೋರ್ಟ್ ಅರ್ಜಿ ಸಲ್ಲಿಕೆಯಾಗಿದೆ.





