ರಾಜ್ಯ

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಭೈರತಿ ಬಸವರಾಜುಗೆ ಸಂಕಷ್ಟ

ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಭೈರತಿ ಬಸವರಾಜುಗೆ ಸಂಕಷ್ಟ ಎದುರಾಗಿದ್ದು, ಬಂಧನದ ಅಗತ್ಯವಿದೆ ಎಂದು ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬಂಧನದಿಂದ ರಕ್ಷಣೆ ನೀಡಿದ್ದ ಆದೇಶದ ತೆರವಿಗೆ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ವಿಚಾರಣೆ ವೇಳೆ ಮಾಜಿ ಸಚಿವ ಭೈರತಿ ಬಸವರಾಜು ಸುಳ್ಳು ಹೇಳಿದ್ದಾರೆ. ಪ್ರಕರಣದಲ್ಲಿ ಸುಳ್ಳು ಸಾಕ್ಷಿಗಳನ್ನು ನೀಡಲಾಗಿದ್ದು, ಅವರನ್ನು ಬಂಧಿಸಬೇಕು ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಲಾಗಿದೆ.

ಇದನ್ನು ಓದಿ : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಮಾಜಿ ಸಚಿವ ಭೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಅವರಿಗೆ ಕಳೆದ ಕೆಲ ದಿನಗಳ ಹಿಂದೆ ಹೈಕೋರ್ಟ್‌ನಿಂದ ಮಧ್ಯಂತರ ರಿಲೀಫ್‌ ಸಿಕ್ಕಿತ್ತು. ನ್ಯಾಯಮೂರ್ತಿ ಅರುಣ್‌ ಅವರ ಪೀಠದಿಂದ ಬಂದ ಆದೇಶವು ಪ್ರಕರಣಕ್ಕೆ ಹೊಸ ತಿರುವು ನೀಡಿತ್ತು.

ಹೈಕೋರ್ಟ್‌ ಮಧ್ಯಂತರ ಆದೇಶದಲ್ಲಿ ಶಾಸಕ ಭೈರತಿ ಬಸವರಾಜು ವಿರುದ್ಧ ತಕ್ಷಣ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಸೂಚನೆ ನೀಡಿತ್ತು. ಜೊತೆಗೆ ಅವರು ತನಿಖೆಗೆ ಸಹಕಾರ ನೀಡಬೇಕು ಎಂದು ಆದೇಶ ನೀಡಿತ್ತು. ಆದರೀಗ ಭೈರತಿ ಬಸವರಾಜುಗೆ ಸಂಕಷ್ಟ ಎದುರಾಗಿದ್ದು, ಬಂಧನದ ಅಗತ್ಯವಿದೆ ಎಂದು ಮತ್ತೆ ಕೋರ್ಟ್‌ ಅರ್ಜಿ ಸಲ್ಲಿಕೆಯಾಗಿದೆ.

ಆಂದೋಲನ ಡೆಸ್ಕ್

Recent Posts

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

27 mins ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

32 mins ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

34 mins ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

36 mins ago

ಪರಿಸರ ಸ್ನೇಹಿ ಸಮಾಜ ಮನೆಯಿಂದಲೇ ಆರಂಭವಾಗಲಿ

ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…

39 mins ago

ಮತ್ತೊಮ್ಮೆ ನ್ಯಾಯಾಲಯದತ್ತ ಮಲ್ಟಿಪ್ಲೆಕ್ಸ್ ಸಂಘಟನೆ, ಇತರರು

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…

43 mins ago