ಬೆಂಗಳೂರು : ಸಾರ್ವಜನಿಕ, ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ರದ್ದು ಮಾಡಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ಸಿಎಂಗೆ ಬರೆದಿರುವ ಪತ್ರ ಬಾರೀ ವಿವಾದ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಇದೀಗ ಆರ್‌ಎಸ್ಎಸ್ ಚಟುವಟಿಕೆಯಲ್ಲಿ ಸರ್ಕಾರಿ ನೌಕರರು ಭಾಗಿಯಾಗುವುದಕ್ಕೂ ಬ್ರೇಕ್ ಹಾಕಬೇಕೆಂದು ಮನವಿ ಮಾಡಿದ್ದಾರೆ.
ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಸರ್ಕಾರಿ ನೌಕರರು ಆರ್ಎಸ್ಎಸ್ ಚಟುವಟಿಕೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಕರ್ನಾಟಕ ಸಿವಿಲ್ ಸರ್ವಿಸ್ ರೂಲ್ಸ್ ಇದೆ. ನಿನ್ನೆ, ಮೊನ್ನೆ ಕೆಲವರು ಆರ್ಎಸ್ಎಸ್ ಕಾರ್ಯಕ್ರಮಕ್ಕೆ ಹೋಗಿದ್ದಾರೆ. ನಮ್ಮ ಇಲಾಖೆಯ ಕೆಲವರು ಹೋಗಿದ್ದಾರೆ, ವರದಿ ಕೇಳಿದ್ದು, ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಹೋಗಿದವರನ್ನು ಸಸ್ಪೆಂಡ್ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.




