ರಾಜ್ಯ

ಸಂಧಾನ ಸಭೆ ಸಫಲ ; 3 ದಿನಗಳಿಂದ ನಡೆಯುತ್ತಿದ್ದ ಲಾರಿ ಮುಷ್ಕರ ಅಂತ್ಯ

ಬೆಂಗಳೂರು: ಲಾರಿ ಮಾಲೀಕರ ಸಂಘದೊಂದಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ನಡೆಸಿದ ಎರಡನೇ ಸಭೆ ಯಶಸ್ವಿಯಾಗಿದ್ದು, ಲಾರಿ ಮಾಲೀಕರು ಮುಷ್ಕರವನ್ನು ವಾಪಸ್‌ ಪಡೆದಿದ್ದಾರೆ (Truckers call off strike). ಈ ಹಿನ್ನೆಲೆ 3 ದಿನಗಳ ಲಾರಿ ಮಾಲೀಕರ ಮುಷ್ಕರ ಅಂತ್ಯಗೊಂಡಿದೆ.

ಸರ್ಕಾರದ ಭರವಸೆ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿ ಮುಷ್ಕರವನ್ನು ವಾಪಸ್ ತೆಗೆದುಕೊಳ್ಳುವುದಾಗಿ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿ.ಆರ್.ಷಣ್ಮುಗಪ್ಪ ಘೋಷಣೆ ಮಾಡಿದ್ದಾರೆ.

ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಷ್ಕರವನ್ನು ತಕ್ಷಣದಿಂದ ವಾಪಸ್ ಪಡೆಯುತ್ತೇವೆ. ಸಚಿವರು ಬಹುತೇಕ ಬೇಡಿಕೆ ಈಡೇರಿಸಿದ್ದಾರೆ. ಸಚಿವರಿಗೆ ಧನ್ಯವಾದ ತಿಳಿಸುತ್ತೇವೆ ಎಂದರು.

ಇನ್ನೂ ಸಚಿವ ರಾಮಲಿಂಗರೆಡ್ಡಿ ಮಾತನಾಡಿ, ಲಾರಿ ಮಾಲೀಕರ ಸಂಘದ ಪದಾಧಿಕಾರಿಗಳ ಜೊತೆ ಸಭೆ ಮಾಡಿದ್ದೇನೆ. ಲಾರಿ ಮಾಲೀಕರ ಸಂಘದವರು ಪ್ರಮುಖವಾಗಿ 6 ಬೇಡಿಕೆ ಇಟ್ಟಿದ್ದರು. ಗಡಿ ಭಾಗದಲ್ಲಿ ಟೋಲ್ ತೆಗೆಯಲು ಸಭೆಯಲ್ಲಿ ಮನವಿ ಮಾಡಿದರು. ಈ ಬಗ್ಗೆ ಮೂರು ದಿನಗಳ ಬಳಿಕ ವರದಿ ತರಿಸಿಕೊಳ್ಳುತ್ತೇನೆ. ನೋ ಎಂಟ್ರಿ ಬೋರ್ಡ್ ಬದಲಾವಣೆ ಕುರಿತು ಚರ್ಚೆ ಮಾಡುತ್ತೇನೆ. ಇದೆಲ್ಲಾ ಸಿಎಂ ಗಮನಕ್ಕೆ ತರಲಿದ್ದೇನೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

10 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

4 hours ago