ರಾಜ್ಯ

ಕಾಂಗ್ರೆಸ್‌ನ ನಿಜ ಬಣ್ಣ ಬಯಲಾಗುತ್ತಿದೆ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ: ಕಾಂಗ್ರೆಸ್‌  ಗ್ಯಾರಂಟಿಗಳನ್ನು ಘೋಷಿಸಿ, ಸುಳ್ಳು ಆಶ್ವಾಸನೆ ನೀಡಿ ರಾಜ್ಯದಲ್ಲಿ ಅಧಿಕಾರ ಹಿಡಿದಿದೆ. ಆದರೆ ಈಗ ಅವರ ನಿಜ ಬಣ್ಣ ಬಯಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಾಂಗ್ರೆಸ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಸ್‌ ಪ್ರಯಾಣ ದರ ಏರಿಕೆಗೆ ಸಂಬಂಧಿಸಿದಂತೆ ಆಕ್ರೋಶಗೊಂಡು ಸುಳ್ಳು ಹೆಸರಿನಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂತು ಅದು ಈಗ ಎಕ್ಸ್‌ಪೋಸ್‌ ಆಗುತ್ತಿದೆ ಎಂದು ಹರಿಹಾಯ್ದರು.

ಉಚಿತ ವಿದ್ಯುತ್‌ ಎಂದರು ಆದರೆ ಈಗ ದರ ಹೆಚ್ಚಳವಾಗಿದೆ. ಆಸ್ತಿ ನೋಂದಣಿ ದರ ಹೆಚ್ಚಳವಾಗಿದೆ. ಪೆಟ್ರೋಲ್‌, ಡೀಸೆಲ್‌ಗೆ ಸೆಸ್‌ ಹಾಕಿದ್ದಾರೆ. ಈಗ ಬಸ್‌ ಟಿಕೆಟ್‌ ದರ ಕೂಡ ಹೆಚ್ಚಳ ಮಾಡಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆ 2000 ಕೋಟಿ ರೂಪಾಯಿ ಸಾಲ ಮಾಡುವ ಹಂತಕ್ಕೆ ಬಂದಿದೆ. ಸರ್ಕಾರದಲ್ಲಿ ನೌಕರರಿಗೆ ಸಂಬಳ ನೀಡಲು ಹಣ ಇಲ್ಲ. ಸಿದ್ದರಾಮಯ್ಯ ಸರ್ಕಾರ ದಿವಾಳಿಯಾಗಿದೆ ಎಂದು ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿಎಂ ರಾಜಕೀಯ ಕಾರ್ಯದರ್ಶಿ ವಜಾ : ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದೇನು?

ಬೆಳಗಾವಿ : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್‌ ಅಹಮ್ಮದ್‌ ಬಿಡುಗಡೆಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್‌ ಜಾರಕಿಹೊಳಿ ಪ್ರತಿಕ್ರಿಯೆ…

13 mins ago

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌, ಸ್ಟವ್‌ ಪತ್ತೆ

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…

2 hours ago

ತಮಿಳುನಾಡು ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ

ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…

2 hours ago

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…

3 hours ago

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

4 hours ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

4 hours ago