ಹುಬ್ಬಳ್ಳಿ: ಕಾಂಗ್ರೆಸ್ ಗ್ಯಾರಂಟಿಗಳನ್ನು ಘೋಷಿಸಿ, ಸುಳ್ಳು ಆಶ್ವಾಸನೆ ನೀಡಿ ರಾಜ್ಯದಲ್ಲಿ ಅಧಿಕಾರ ಹಿಡಿದಿದೆ. ಆದರೆ ಈಗ ಅವರ ನಿಜ ಬಣ್ಣ ಬಯಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಸ್ ಪ್ರಯಾಣ ದರ ಏರಿಕೆಗೆ ಸಂಬಂಧಿಸಿದಂತೆ ಆಕ್ರೋಶಗೊಂಡು ಸುಳ್ಳು ಹೆಸರಿನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು ಅದು ಈಗ ಎಕ್ಸ್‌ಪೋಸ್ ಆಗುತ್ತಿದೆ ಎಂದು ಹರಿಹಾಯ್ದರು.
ಉಚಿತ ವಿದ್ಯುತ್ ಎಂದರು ಆದರೆ ಈಗ ದರ ಹೆಚ್ಚಳವಾಗಿದೆ. ಆಸ್ತಿ ನೋಂದಣಿ ದರ ಹೆಚ್ಚಳವಾಗಿದೆ. ಪೆಟ್ರೋಲ್, ಡೀಸೆಲ್‌ಗೆ ಸೆಸ್ ಹಾಕಿದ್ದಾರೆ. ಈಗ ಬಸ್ ಟಿಕೆಟ್ ದರ ಕೂಡ ಹೆಚ್ಚಳ ಮಾಡಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆ 2000 ಕೋಟಿ ರೂಪಾಯಿ ಸಾಲ ಮಾಡುವ ಹಂತಕ್ಕೆ ಬಂದಿದೆ. ಸರ್ಕಾರದಲ್ಲಿ ನೌಕರರಿಗೆ ಸಂಬಳ ನೀಡಲು ಹಣ ಇಲ್ಲ. ಸಿದ್ದರಾಮಯ್ಯ ಸರ್ಕಾರ ದಿವಾಳಿಯಾಗಿದೆ ಎಂದು ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…