Mysore
27
scattered clouds

Social Media

ಮಂಗಳವಾರ, 11 ಫೆಬ್ರವರಿ 2025
Light
Dark

ಅಧಿಕಾರಕ್ಕೆ ಸಂಬಂಧಿಸಿದಂತೆ ಒಪ್ಪಂದವಾಗಿರುವುದು ನಿಜ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಗೆ ಒಪ್ಪಂದವಾಗಿರುವುದು ನಿಜ. ಆದರೆ ನಾನು ಎಂದೂ ಕೂಡ ಹೈಕಮಾಂಡ್‌ಗೆ ಬ್ಲ್ಯಾಕ್‌ಮೇಲ್‌ ಮಾಡಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಕುರ್ಚಿ ಖಾಲಿಯಿಲ್ಲ. ಆದರೆ, ಅಧಿಕಾರಕ್ಕೆ ಸಂಬಂಧಿಸಿದಂತೆ ನಮ್ಮ ನಡುವೆ ಒಪ್ಪಂದವಾಗಿರುವುದು ನಿಜ. ಅದನ್ನು ಈಗ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು.

ಪ್ರಸ್ತುತ ನಾನು ಡಿಸಿಎಂ ಆಗಿ ಕೆಲಸ ಮಾಡುತ್ತಿದ್ದೇನೆ. ರಾಜ್ಯದ ಅಭಿವೃದ್ಧಿಗೆ ನಾನು ಹಾಗೂ ಸಿಎಂ ಸಿದ್ದರಾಮಯ್ಯ ಅವರು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಆದರೆ ಅಧಿಕಾರಕ್ಕೆ ಸಂಬಂಧಿಸಿದಂತೆ ಒಪ್ಪಂದವಾಗಿರುವುದು ನಿಜ. ಅದನ್ನು ಈಗ ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ ಎಂದರು.

ನಾನು ಯಾವತ್ತೂ ಹೈಕಮಾಂಡ್‌ಗೆ ಬ್ಲ್ಯಾಕ್‌ಮೇಲ್‌ ಮಾಡಿಲ್ಲ. ನಾನು ಪಕ್ಷದ ನಿರ್ಧಾರಕ್ಕೆ ಬದ್ಧನಾಗಿದ್ದೇನೆ. ನಾನು ಯಾವತ್ತೂ ಹೈಕಮಾಂಡ್‌ ವಿರುದ್ಧ ಹೋಗುವುದಿಲ್ಲ. ನನಗೆ ಗಾಂಧಿ ಕುಟುಂಬದ ಮೇಲೆ ಪ್ರೀತಿಯಿದೆ. ಗಾಂಧಿ ಕುಟುಂಬಕ್ಕೆ ನಾನು ಲಾಯರ್‌ ಆಗಿದ್ದೇನೆ. ಒಂದು ದಿನ ಅದಕ್ಕೆ ಫಲ ಸಿಗಲಿದೆ. ನಾನು ಅದಕ್ಕಾಗಿ ಕಾಯುತ್ತಿದ್ದೇನೆ ಎಂದು ಹೇಳಿದರು.

Tags: