ಬೆಂಗಳೂರು: ಬೇಸಿಗೆಯ ಹಿನ್ನೆಲೆಯಲ್ಲಿ ಏಪ್ರಿಲ್.5ರ ನಂತರ ತುಂಗಭದ್ರಾ ಕಾಲುವೆಗಳಲ್ಲಿ ಕುಡಿಯಲಷ್ಟೇ ನೀರು ಹರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಏಪ್ರಿಲ್.5ರ ನಂತರ ತುಂಗಭದ್ರಾ ಕಾಲುವೆಗಳಲ್ಲಿ ಕುಡಿಯುವ ನೀರು ಸರಬರಾಜಿಗೆ ಮಾತ್ರ ನೀರು ಬಿಡಲಾಗುವುದು ಎಂದು ಜಲಸಂಪನ್ಮೂಲ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸಿಎಸ್ ಶಾಲಿನಿ ರಜನೀಶ್ ಸೂಚನೆ ನೀಡಿದ್ದಾರೆ.
ಭದ್ರಾ ಜಲಾಶಯದಲ್ಲಿ ಪ್ರಸ್ತುತ 28 ಟಿಎಂಸಿ ನೀರು ಸಂಗ್ರಹವಾಗಿದೆ. ಮೇ.8ರವರೆಗೆ 11 ಟಿಎಂಸಿ ನೀರು ನೀರಾವರಿಗೆ ಅಗತ್ಯವಿದೆ. ಜಲಾಶಯದ ಎಂಜಿನಿಯರ್‌ಗಳ ಲೆಕ್ಕಾಚಾರದ ಪ್ರಕಾರ, ಮೇಲ್ದಂಡೆ ಮತ್ತು ಕೆಳದಂಡೆ ಸೇರಿದಂತೆ 14 ಟಿಎಂಸಿ ಕುಡಿಯುವ ನೀರಿನ ಅವಶ್ಯಕತೆ ಇದೆ. ಆದ್ದರಿಂದ ಉಳಿದ ಶುದ್ಧ ಲಭ್ಯತೆ ಕೇವಲ 3 ಟಿಎಂಸಿ ಆಗಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಏಪ್ರಿಲ್.5ರ ನಂತರ ತುಂಗಭದ್ರಾ ಕಾಲುವೆಗಳಲ್ಲಿ ಕುಡಿಯುವ ನೀರು ಸರಬರಾಜಿಗೆ ಮಾತ್ರ ನೀರು ಬಿಡಲಾಗುವುದು. ಈ ಬಗ್ಗೆ ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ.





