ಬೆಳಗಾವಿ: ರಾಜ್ಯದಲ್ಲಿ ಈಗ ತುಘಲಕ್ ದರ್ಬಾರ್ ನಡೆಯುತ್ತಿದೆ. ದು ಮುಂದುವರಿಯಲಿ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ದೂರಿದ್ದಾರೆ.
ಇಂದು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಅರ್ಥವಿಲ್ಲ. ಜನರನ್ನು ತೃಪ್ತಿಪಡಿಸಲು ಜಾರಿಗೆ ತಂದ ಯಾವ ಯೋಜನೆಗಳು ಕಾರ್ಯರೂಪಕ್ಕೆ ಬರುತ್ತಿಲ್ಲ. ಇವು ಕೇವಲ ಅಧಿಕಾರ ಪಡೆಯಲು ಜಾರಿ ಮಾಡಿದ ಗ್ಯಾರಂಟಿಗಳು ಎಂದು ಆರೋಪಿಸಿದರು.
ಇನ್ನು ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಅನುದಾನ ನೀಡದರ ಕುರಿತು ಪ್ರತಿಕ್ರಿಯಿಸಿದ ಅವರು, ಇದು ಎಲ್ಲರಿಗೂ ಗೊತ್ತಿರುವ ವಿಷಯ ಎಂದರು.





