ಬೆಂಗಳೂರು: ತುಳು ಮತ್ತು ಕನ್ನಡ ವಿದ್ವಾಂಸ ಹಾಗೂ ಸಾಹಿತಿಯಾಗಿದ್ದ ಡಾ.ವಾಮನ ನಂದಾವರ ಅವರು ನಿಧನ ಹೊಂದಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ತುಳು-ಕನ್ನಡ ವಿದ್ವಾಂಸರಾಗಿದ್ದ ಡಾ.ವಾಮನ ನಂದಾವರ ನಿಧನದಿಂದ ದು:ಖವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ತುಳು ಅಕಾಡೆಮಿಯ ಅಧ್ಯಕ್ಷತೆಯೂ ಸೇರಿದಂತೆ ಹಲವಾರು ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘಟನೆಗಳ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದ್ದ ಡಾ.ನಂದಾವರ ಅವರು ತುಳು ಮತ್ತು ಕನ್ನಡ ಜಾನಪದ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಹಲವಾರು ಗ್ರಂಥಗಳನ್ನು ರಚಿಸಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು ಡಾ.ವಾಮನ ನಂದಾವರ ಅವರ ಕುಟುಂಬ ಮತ್ತು ಬಂಧುಮಿತ್ರರ ಶೋಕದಲ್ಲಿ ನಾನೂ ಭಾಗಿಯಾಗಿದ್ದು, ಮೃತರ ಆತ್ಮಕ್ಕೆ ಶಾಂತಿ ಕೋರುವೆ ಎಂದು ಸಂತಾಪ ಸೂಚಿಸಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ಸುಲಲಿತ ವ್ಯವಹಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಅಗತ್ಯ ಇರುವ ಭೂಮಿಯ ಸ್ವಯಂ…
ಮೈಸೂರು : ಇಲ್ಲಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಜ.25 ರಂದು ಬೆಳಗಿನ ಜಾವ 5.30ಕ್ಕೆ 108 ಸಾಮೂಹಿಕ ಸೂರ್ಯ ನಮಸ್ಕಾರ…
ಬೆಂಗಳೂರು : ರಥಸಪ್ತಮಿಯ ನಂತರ ಬಿಸಿಲು ಹೆಚ್ಚಾಗಿ ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಕಾರಣ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು…
ಬೆಂಗಳೂರು : ಸಿಲಿಕಾನ್ ಸಿಟಿ ಎಂಬ ಖ್ಯಾತಿಗೆ ಒಳಗಾಗಿರುವ ರಾಜ್ಯ ರಾಜಧಾನಿ ಬೆಂಗಳೂರು ಇದೀಗ ವಿಶ್ವದಲ್ಲೇ ಅತಿ ಹೆಚ್ಚು ವಾಹನ…
ಬೆಂಗಳೂರು : ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ಒರಿಜಿನಲ್ ವಿನಾಯಕ ಮೈಲಾರಿ-1938 ಹೋಟೆಲ್‍ನ ಬೆಂಗಳೂರು ಶಾಖೆಗೆ ಮುಖ್ಯಮಂತ್ರಿ…
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…