ತುಮಕೂರು: ತುಮಕೂರು ರೈಲ್ವೆ ನಿಲ್ದಾಣವನ್ನು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿಸಲು 88.41 ಕೋಟಿ ರೂ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ರೈಲ್ವೆ ನಿಲ್ದಾಣವನ್ನು ಸಿದ್ಧಗಂಗಾ ಮಠದ ಮಾದರಿಯ ವಾಸ್ತುಶಿಲ್ಪದ ವಿನ್ಯಾಸದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ.
ಬಹುಮಹಡಿ ಕಟ್ಟಡ, ಸುಸಜ್ಜಿತ ವಾಹನ ನಿಲುಗಡೆ ವ್ಯವಸ್ಥೆ, ಆಗಮನ-ನಿರ್ಗಮನಕ್ಕೆ ಪ್ರತ್ಯೇಕ ದ್ವಾರಗಳು, ಲಿಫ್ಟ್ ಜೊತೆಗೆ ವಾಣಿಜ್ಯ ಕಟ್ಟಡ ನಿರ್ಮಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಇನ್ನು ಬೆಂಗಳೂರಿನಿಂದ ತುಮಕೂರು ಕೂಡ ಅತಿ ವೇಗವಾಗಿ ಬೆಳೆಯುತ್ತಿದ್ದು, ಈ ಉದ್ದೇಶದಿಂದಲೇ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ತಿಳಿಸಿದರು.
ಈ ಮೂಲಕ ಸಚಿವ ವಿ.ಸೋಮಣ್ಣ ಅವರು ತಮ್ಮ ಕ್ಷೇತ್ರ ತುಮಕೂರನ್ನು ಅಭಿವೃದ್ಧಿ ಪಡಿಸಬೇಕು ಎಂಬ ಪಣ ತೊಟ್ಟಿದ್ದು, ರೈಲ್ವೆ ಇಲಾಖೆ ಸಚಿವರಾಗಿ ಅನೇಕ ಶ್ರಮ ವಹಿಸುತ್ತಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…