ರಾಜ್ಯ

ತುಮಕೂರು: ಮಕ್ಕಳ ಮಾರಾಟ ಜಾಲ ಭೇದಿಸಿದ ಪೊಲೀಸರು

ಬೆಂಗಳೂರು: ಅವಿವಾಹಿತ ಹಾಗೂ ಅಕ್ರಮ ಸಂಬಂಧದಿಂದ ಗರ್ಭಧರಿಸಿ ಮಹಿಳೆಯರನ್ನು ಪತ್ತೆಹಚ್ಚಿ ಅವರು ಜನ್ಮ ನೀಡುವ ಮಕ್ಕಳನ್ನು ಪಡೆದು ಸಂತಾನಹೀನ ದಂಪತಿಗಳಿಗೆ ಮಾರಾಟ ಮಾಡುತ್ತಿದ್ದ ವ್ಯವಸ್ಥಿತ ಜಾಲವೊಂದನ್ನು ಪತ್ತೆ ಹಚ್ಚಿರುವ ತುಮಕೂರು ಜಿಲ್ಲೆಯ ಪೊಲೀಸರು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಸಿಬ್ಬಂದಿಗಳನ್ನು ಬಂಧಿಸಿದ್ದಾರೆ.

ಜಾಲವನ್ನು ಭೇಧಿಸಿರುವ ತುಮಕೂರು ಪೊಲೀಸರು, 7 ಮಂದಿ ಆರೋಪಿಗಳನ್ನು ಬಂಧಿಸಿ, 5 ಮಕ್ಕಳನ್ನು ರಕ್ಷಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕುಣಿಗಲ್ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಆಗಿ ಕೆಲಸ ಮಾಡುತ್ತಿರುವ ಯು.ಡಿ.ಮಹೇಶ್, ಮೆಹಬೂಬ್ ಷರೀಫ್ ಎಂಬ ಚಿಕ್ಕನಾಯ್ಕನಹಳ್ಳಿ ತಾಲ್ಲೂಕಿನ ಇಬ್ಬರನ್ನು, ಜಾತ್ರೆಗಳಲ್ಲಿ ಹಚ್ಚೆ ಬರೆಯುವ ಗುಬ್ಬಿ ತಾಲ್ಲೂಕಿನ ಚಿಕ್ಕಗುಡ್ಡ ಗ್ರಾಮದ ಕೆ.ಎನ್.ರಾಮಕೃಷ್ಣ, ತುಮಕೂರಿನ ಭಾರತಿ ನಗರದ ಹನುಮಂತರಾಜು, ನಾಗಮಂಗಲ ಮುಬಾರಕ್ ಪಾಶ, ದೊಡ್ಡೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುವ ಪೂರ್ಣಿಮಾ, ಶಿರಾ ನಗರದ ಸೌಜನ್ಯ ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಕಾರು, 50 ಸಾವಿರ ರೂ ನಗದು ಹಾಗೂ ಮೊಬೈಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದೇ ಜೂ.9 ರಂದು ಗುಬ್ಬಿ ನಗರದ ಚನ್ನಬಸವೇಶ್ವರ ದೇವಸ್ಥಾನದ ಬಳಿ ಮಹದೇವಿ ಎಂಬುವರು ಮಲಗಿದ್ದಾಗ ಆಕೆಯ 11 ತಿಂಗಳ ಗಂಡು ಮಗುವನ್ನು ದುಷ್ಕರ್ಮಿಗಳು ಅಪಹರಿಸಿದ್ದರು. ಈ ಬಗ್ಗೆ ಮಹಿಳೆ ಗುಬ್ಬಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು. ದೂರು ಆಧರಿಸಿ ತನಿಖೆ ನಡೆಸಿದ ಗುಬ್ಬಿ ಪೊಲೀಸರು ತಾಂತ್ರಿಕ ಸಹಾಯದ ಆಧಾರದಲ್ಲಿ ಮಗುವನ್ನು ಕಳ್ಳತನ ಮಾಡಿದ ರಾಮಕೃಷ್ಣ ಹಾಗೂ ಹನುಮಂತರನ್ನು ಬಂಧಿಸಿದ್ದರು. ಹೆಚ್ಚಿನ ವಿಚಾರಣೆ ನಡೆಸಿದಾಗ ಆರೋಪಿಗಳು ಮಗುವನ್ನು ಬೆಳ್ಳೂರು ಕ್ರಾಸ್‍ನ ಮುಬಾರಕ್ ಅವರಿಗೆ 1.75 ಲಕ್ಷ ರೂ.ಗಳಿಗೆ ಮಾರಾಟ ಮಾಡಿದ್ದಾಗಿ ವಿವರಿಸಿದ್ದಾರೆ.

ಆರೋಪಿಗಳು ಮಕ್ಕಳನ್ನು 2 ರಿಂದ 3 ಲಕ್ಷ ರೂ.ಗಳಿಗೆ ಮಾರಾಟ ಮಾಡುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ. ಆರೋಪಿಗಳು ಈವರೆಗೂ 9 ಮಕ್ಕಳನ್ನು ಮಾರಾಟ ಮಾಡಿದ್ದು, ಕಾರ್ಯಾಚರಣೆ ನಡೆಸಿದ ಪೊಲೀಸರು 5 ಮಕ್ಕಳನ್ನು ಸಂರಕ್ಷಿಸಿದ್ದಾರೆ. ಒಂದು ಮಗು ಮೃತಪಟ್ಟಿದ್ದು, ಇನ್ನೊಂದನ್ನು ಪೋಷಕರಿಗೆ ವಾಪಸ್ ನೀಡಲಾಗಿದೆ.

ಸಂರಕ್ಷಿಸಲಾದ 5 ಮಕ್ಕಳಲ್ಲಿ 4 ಮಕ್ಕಳು ಕಲ್ಯಾಣ ಕೇಂದ್ರದ ಆಶಯದಲ್ಲಿ ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಆರೋಪಿಗಳು ಮಕ್ಕಳನ್ನು ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

2 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

2 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

2 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

3 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

4 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

4 hours ago