Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ರಾಜ್ಯ ಸರ್ಕಾರದ ಬಳಿ ರಸ್ತೆ ದುರಸ್ತಿಗೂ ಹಣವಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೇವಡಿ

ಹುಬ್ಬಳ್ಳಿ: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ ಗೇಟ್‌ ಕೊಚ್ಚಿ ಹೋಗಿರುವ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಜಲಾಶಯ ಖಾಲಿ ಇದ್ದಾಗಲೇ ಬೇಸಿಗೆಯಲ್ಲಿ ಅದನ್ನು ಸರಿಯಾಗಿ ನಿರ್ವಹಣೆ ಮಾಡಬೇಕಿತ್ತು. ಆದರೆ ಆ ಕೆಲಸವನ್ನು ರಾಜ್ಯ ಸರ್ಕಾರ ಮಾಡಿಲ್ಲ. ರಾಜ್ಯ ಸರ್ಕಾರ, ಕೇಂದ್ರ ಸರ್ಕಾರದ ಸಲಹೆಗಳನ್ನು ಪಾಲಿಸದೇ ಧಿಕ್ಕರಿಸಿದೆ. ಆದ್ದರಿಂದ ಈ ಅವಘಡ ಸಂಭವಿಸಿದೆ. ಇನ್ನಾದರೂ ಡ್ಯಾಂ ನಿರ್ವಹಣೆ ಬಗ್ಗೆ ಗಮನವಿರಲಿ ಎಂದು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು.

ಕೂಡಲೇ ರಾಜ್ಯ ಸರ್ಕಾರ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಸರಿಪಡಿಸಲು ಮುಂದಾಗಬೇಕು. ಈ ಮೂಲಕ ಅನ್ನದಾತರಿಗೆ ಬೆಳೆ ಬೆಳೆಯಲು ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಇನ್ನು ರಾಜ್ಯ ಸರ್ಕಾರದ ಬಳಿ ರಸ್ತೆ ದುರಸ್ತಿ ಮಾಡಲು ಹಣವಿಲ್ಲ. ಹೀಗಾಗಿ ಜಲಾಶಯದ ಕ್ರಸ್ಟ್‌ ಗೇಟ್‌ ಸರಿಮಾಡಲು ಸ್ವಲ್ಪ ಕಾಲಾವಕಾಶ ಬೇಕಾಗಬಹುದು. ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ ಎಂದು ಕಿಡಿಕಾರಿದರು.

 

Tags: