ಹುಬ್ಬಳ್ಳಿ: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿರುವ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಜಲಾಶಯ ಖಾಲಿ ಇದ್ದಾಗಲೇ ಬೇಸಿಗೆಯಲ್ಲಿ ಅದನ್ನು ಸರಿಯಾಗಿ ನಿರ್ವಹಣೆ ಮಾಡಬೇಕಿತ್ತು. ಆದರೆ ಆ ಕೆಲಸವನ್ನು ರಾಜ್ಯ ಸರ್ಕಾರ ಮಾಡಿಲ್ಲ. ರಾಜ್ಯ ಸರ್ಕಾರ, ಕೇಂದ್ರ ಸರ್ಕಾರದ ಸಲಹೆಗಳನ್ನು ಪಾಲಿಸದೇ ಧಿಕ್ಕರಿಸಿದೆ. ಆದ್ದರಿಂದ ಈ ಅವಘಡ ಸಂಭವಿಸಿದೆ. ಇನ್ನಾದರೂ ಡ್ಯಾಂ ನಿರ್ವಹಣೆ ಬಗ್ಗೆ ಗಮನವಿರಲಿ ಎಂದು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು.
ಕೂಡಲೇ ರಾಜ್ಯ ಸರ್ಕಾರ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಸರಿಪಡಿಸಲು ಮುಂದಾಗಬೇಕು. ಈ ಮೂಲಕ ಅನ್ನದಾತರಿಗೆ ಬೆಳೆ ಬೆಳೆಯಲು ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು.
ಇನ್ನು ರಾಜ್ಯ ಸರ್ಕಾರದ ಬಳಿ ರಸ್ತೆ ದುರಸ್ತಿ ಮಾಡಲು ಹಣವಿಲ್ಲ. ಹೀಗಾಗಿ ಜಲಾಶಯದ ಕ್ರಸ್ಟ್ ಗೇಟ್ ಸರಿಮಾಡಲು ಸ್ವಲ್ಪ ಕಾಲಾವಕಾಶ ಬೇಕಾಗಬಹುದು. ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ ಎಂದು ಕಿಡಿಕಾರಿದರು.
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…