ವಿಜಯನಗರ: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕಟ್ ಆಗಿರುವ ಹಿನ್ನೆಲೆಯಲ್ಲಿ ಗೇಟ್ ದುರಸ್ತಿ ಕಾರ್ಯವನ್ನು ತಜ್ಞರ ತಂಡ ಪರಿಶೀಲನೆ ನಡೆಸಿದೆ.
ಇನ್ನು ಜಲಾಶಯಕ್ಕೆ ಆಂಧ್ರಪ್ರದೇಶದ ಜಲ ಸಂಪನ್ಮೂಲ ಸಚಿವ ನಿರ್ಮಲಾ ರಾಮನಾಯ್ಡು ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೇಟ್ ದುರಸ್ತಿ ಕಾರ್ಯ ಪರಿಶೀಲಿಸಿದ ಸಚಿವರು ಹೊಸ ಗೇಟ್ ಅಳವಡಿಕೆ ಕುರಿತು ತಜ್ಞರೊಂದಿಗೆ ಮಾಹಿತಿ ಪಡೆದುಕೊಂಡರು.
ಆಂಧ್ರಪ್ರದೇಶ ತಜ್ಞರ ತಂಡವು ಸಹ ಗೇಟ್ ಕೊಚ್ಚಿ ಹೋಗಿರುವ ಸ್ಥಳದಲ್ಲಿ ತಾತ್ಕಾಲಿಕ ವ್ಯವಸ್ಥೆ ಮತ್ತು ಹೊಸ ಗೇಟ್ ಅಳವಡಿಸುವ ಪ್ರಯತ್ನ ಕುರಿತು ಚರ್ಚೆ ನಡೆಸಿತು.
ಇಂದು ಜಲಾಶಯದಿಂದ ಒಂದು ಲಕ್ಷ ಕ್ಯೂಸೆಕ್ಸ್‌ಗೂ ಹೆಚ್ಚಿನ ನೀರನ್ನು ಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ಆಂಧ್ರದ ಕರ್ನೂಲ್ ಜಿಲ್ಲೆಯ ತಗ್ಗು ಪ್ರದೇಶಗಳಲ್ಲಿ ಆಂಧ್ರಪ್ರದೇಶ ಸರ್ಕಾರ ಹೈಅಲರ್ಟ್ ಘೋಷಣೆ ಮಾಡಿದೆ.
ಜನರು ಯಾವುದೇ ಕಾರಣಕ್ಕೂ ನದಿಗೆ ಇಳಿಯದಂತೆ ನೀರಾವರಿ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದು, ನದಿ ಬಳಿ ಹಲವು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.