Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ತುಂಗಭದ್ರಾ ಡ್ಯಾಂ ಕ್ರಸ್ಟ್‌ ಗೇಟ್‌ ಕೊಚ್ಚಿಹೋದ ಪ್ರಕರಣ: ಭತ್ತಕ್ಕೆ ಪ್ಯಾಕೇಜ್‌ ಘೋಷಿಸುವಂತೆ ರೈತರ ಆಗ್ರಹ

ವಿಜಯನಗರ: ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಕೊಚ್ಚಿಹೋಗಿರುವ ಹಿನ್ನೆಲೆಯಲ್ಲಿ ಈ ಬಾರಿ ಭತ್ತಕ್ಕೆ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ ಗೇಟ್‌ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಒಂದು ಬೆಳೆಗೂ ಸಹ ನೀರು ಸಿಗುವುದು ಸಂಶಯವಿದೆ.

ಹೀಗಿದ್ದರೂ ಸರ್ಕಾರ ಮಾತ್ರ ಒಂದು ಬೆಳೆಗೆ ನೀರು ಬಿಡುತ್ತೇವೆ ಎಂದು ಹೇಳಿದೆ. ಅದು ಅಸಾಧ್ಯ. ಮುಂದಿನ ದಿನಗಳಲ್ಲಿ ಮಳೆ ಬಾರದೇ ಹೋದರೆ ಒಂದು ಬೆಳೆಗೂ ನೀರು ಸಿಗುವುದಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರ ರೈತರಿಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನು ಉತ್ತರ ಕರ್ನಾಟಕ ಭಾಗದ ಅಣೆಕಟ್ಟೆಗಳ ವಿಚಾರದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ. ತುಂಗಭದ್ರಾ ಜಲಾಶಯದ  ಗೇಟ್ ಕೊಚ್ಚಿಕೊಂಡು ಹೋಗಿರುವ ಅವಘಡ ಸಂಭವಿಸಲು ಸರ್ಕಾರವೇ ಕಾರಣ ಎಂದು ಾರೋಪಿಸಿದರು.

ಕೂಡಲೇ ಈ ಭಾಗಕ್ಕೆ ಸಚಿವರು ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಒಂದು ಎಕರೆಗೆ ಏನು ಪರಿಹಾರ ಕೊಡಬೇಕೋ ಅದನ್ನು ರೈತರಿಗೆ ಕೊಡಬೇಕು ಎಂದು ಆಗ್ರಹಿಸಿದರು.

 

Tags: