ವಿಜಯನಗರ: ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕೊಚ್ಚಿಹೋಗಿರುವ ಹಿನ್ನೆಲೆಯಲ್ಲಿ ಈ ಬಾರಿ ಭತ್ತಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.
ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಒಂದು ಬೆಳೆಗೂ ಸಹ ನೀರು ಸಿಗುವುದು ಸಂಶಯವಿದೆ.
ಹೀಗಿದ್ದರೂ ಸರ್ಕಾರ ಮಾತ್ರ ಒಂದು ಬೆಳೆಗೆ ನೀರು ಬಿಡುತ್ತೇವೆ ಎಂದು ಹೇಳಿದೆ. ಅದು ಅಸಾಧ್ಯ. ಮುಂದಿನ ದಿನಗಳಲ್ಲಿ ಮಳೆ ಬಾರದೇ ಹೋದರೆ ಒಂದು ಬೆಳೆಗೂ ನೀರು ಸಿಗುವುದಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.
ಇನ್ನು ಉತ್ತರ ಕರ್ನಾಟಕ ಭಾಗದ ಅಣೆಕಟ್ಟೆಗಳ ವಿಚಾರದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ. ತುಂಗಭದ್ರಾ ಜಲಾಶಯದ ಗೇಟ್ ಕೊಚ್ಚಿಕೊಂಡು ಹೋಗಿರುವ ಅವಘಡ ಸಂಭವಿಸಲು ಸರ್ಕಾರವೇ ಕಾರಣ ಎಂದು ಾರೋಪಿಸಿದರು.
ಕೂಡಲೇ ಈ ಭಾಗಕ್ಕೆ ಸಚಿವರು ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಒಂದು ಎಕರೆಗೆ ಏನು ಪರಿಹಾರ ಕೊಡಬೇಕೋ ಅದನ್ನು ರೈತರಿಗೆ ಕೊಡಬೇಕು ಎಂದು ಆಗ್ರಹಿಸಿದರು.
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…
ಮೈಸೂರು: ಸಂಸತ್ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…