Mysore
19
overcast clouds
Light
Dark

ತುಂಗಭದ್ರಾ ಡ್ಯಾಂ ಗೇಟ್‌ ಕೊಚ್ಚಿ ಹೋದ ಪ್ರಕರಣ: ತನಿಖೆಗೆ ಆಗ್ರಹಿಸಿದ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಕೊಚ್ಚಿ ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆಯಾಗಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತುಂಗಭದ್ರಾ ಜಲಾಶಯ 70 ವರ್ಷ ಹಳೆಯದ್ದು, ಡ್ಯಾಂ ಸೇಫ್ಟಿ ವರದಿ ನೀಡಲು ಮಾಡಿದ್ದ ಸಮಿತಿಗಳು ಇಲ್ಲಿಯವರೆಗೂ ಸರಿಯಾಗಿ ಮಾಹಿತಿಯನ್ನೇ ಕೊಟ್ಟಿಲ್ಲ. 133 ಟಿಎಂಸಿ ನೀರು ರಾಜ್ಯಕ್ಕೆ ಪಡೆಯಲು ಡ್ಯಾಂ ಕಟ್ಟಲಾಗಿದೆ. 73 ಟಿಎಂಸಿ ಆಂಧ್ರಕ್ಕೆ ಅಂತ ಆಗಿದೆ ಎಂದರು.

ಇನ್ನು 133 ಟಿಎಂಸಿಯಲ್ಲಿ ಈಗ 33 ಟಿಎಂಸಿ ಹೂಳು ತುಂಬಿಕೊಂಡಿದೆ. ಈಗ ಗೇಟ್‌ ಕೊಚ್ಚಿ ಹೋಗಿದೆ. ಡ್ಯಾಂ ಸೇಫ್ಟಿಗಾಗಿ ಇರುವ ಪ್ರತಿಯೊಂದು ಸಮಿತಿಯನ್ನು ಸೂಕ್ತ ರೀತಿಯಲ್ಲಿ ಪರಿಶೀಲನೆ ಮಾಡಬೇಕು ಎಂದು ಆಗ್ರಹಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ತುಂಗಭದ್ರಾ ಜಲಾಶಯದ ಗೇಟ್‌ ತುಂಡಾದ ಪ್ರಕರಣವನ್ನು ತನಿಖೆಗೆ ಕೊಡಬೇಕು. ಸರ್ಕಾರ ಈಗ ತರಾತುರಿಯಲ್ಲಿ ಏನು ಮಾಡಲು ಹೋಗಬಾರದು. ಎಲ್ಲದಕ್ಕೂ ಸೂಕ್ತ ತಜ್ಞರನ್ನು ನೇಮಕ ಮಾಡಿ ಸಮಸ್ಯೆ ಪರಿಹರಿಸಿ, ಯಾರಾದರೂ ತಪ್ಪಿತಸ್ಥರಿದ್ದರೆ ಅವರಿಗೆ ಕಠಿಣ ಶಿಕ್ಷೆಯಾಗಲೇಬೇಕು ಎಂದು ಆಗ್ರಹಿಸಿದರು.