ಬೆಂಗಳೂರು: ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕೊಚ್ಚಿ ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆಯಾಗಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತುಂಗಭದ್ರಾ ಜಲಾಶಯ 70 ವರ್ಷ ಹಳೆಯದ್ದು, ಡ್ಯಾಂ ಸೇಫ್ಟಿ ವರದಿ ನೀಡಲು ಮಾಡಿದ್ದ ಸಮಿತಿಗಳು ಇಲ್ಲಿಯವರೆಗೂ ಸರಿಯಾಗಿ ಮಾಹಿತಿಯನ್ನೇ ಕೊಟ್ಟಿಲ್ಲ. 133 ಟಿಎಂಸಿ ನೀರು ರಾಜ್ಯಕ್ಕೆ ಪಡೆಯಲು ಡ್ಯಾಂ ಕಟ್ಟಲಾಗಿದೆ. 73 ಟಿಎಂಸಿ ಆಂಧ್ರಕ್ಕೆ ಅಂತ ಆಗಿದೆ ಎಂದರು.
ಇನ್ನು 133 ಟಿಎಂಸಿಯಲ್ಲಿ ಈಗ 33 ಟಿಎಂಸಿ ಹೂಳು ತುಂಬಿಕೊಂಡಿದೆ. ಈಗ ಗೇಟ್ ಕೊಚ್ಚಿ ಹೋಗಿದೆ. ಡ್ಯಾಂ ಸೇಫ್ಟಿಗಾಗಿ ಇರುವ ಪ್ರತಿಯೊಂದು ಸಮಿತಿಯನ್ನು ಸೂಕ್ತ ರೀತಿಯಲ್ಲಿ ಪರಿಶೀಲನೆ ಮಾಡಬೇಕು ಎಂದು ಆಗ್ರಹಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ತುಂಗಭದ್ರಾ ಜಲಾಶಯದ ಗೇಟ್ ತುಂಡಾದ ಪ್ರಕರಣವನ್ನು ತನಿಖೆಗೆ ಕೊಡಬೇಕು. ಸರ್ಕಾರ ಈಗ ತರಾತುರಿಯಲ್ಲಿ ಏನು ಮಾಡಲು ಹೋಗಬಾರದು. ಎಲ್ಲದಕ್ಕೂ ಸೂಕ್ತ ತಜ್ಞರನ್ನು ನೇಮಕ ಮಾಡಿ ಸಮಸ್ಯೆ ಪರಿಹರಿಸಿ, ಯಾರಾದರೂ ತಪ್ಪಿತಸ್ಥರಿದ್ದರೆ ಅವರಿಗೆ ಕಠಿಣ ಶಿಕ್ಷೆಯಾಗಲೇಬೇಕು ಎಂದು ಆಗ್ರಹಿಸಿದರು.
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…
ಮೈಸೂರು: ಸಂಸತ್ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…