ಕೊಪ್ಪಳ : ಬೇಸಿಗೆ ಸಮಯದಲ್ಲಿ ನೀರೇ ಇಲ್ಲದೆ ಡೆಡ್ ಸ್ಟೋರ್ ಗೆ ಇಳಿದಿದ್ದಂತಹ ತುಂಗಭದ್ರ ಜಲಾಶಯಕ್ಕೆ ೨೪ ಗಂಟೆಯಲ್ಲಿ ಬರೋಬ್ಬರಿ ೪ ಟಿಎಂಸಿ ನೀರು ಹರಿದು ಬಂದಿದ್ದು, ಜಲಾಶಯಕ್ಕೆ ಜೀವ ಕಳೆ ಬಂದಿದೆ.
ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಕಾರಣದಿಂದ ತುಂಗಾಭದ್ರಾ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದೆ. ಜಲಾಶಯಕ್ಕೆ ೫೦೯೭೧ ಕ್ಯೂಸೆಕ್ ನೀರು ಹರಿದುಬರುತ್ತಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ೧೩೫೯೧ ಟಿಎಂಸಿ ಇದ್ದ ನೀರು ಇಂದು ಏಕಾಏಕಿ ಡ್ಯಾಂನಲ್ಲಿ ೧೭೯೧೨ ಟಿಎಂಸಿ ನೀರು ಸಂಗ್ರಹವಾಗಿದೆ. ಈ ಮೂಲಕವಾಗಿ ಕಳೆದ ೨೪ ಗಂಟೆಯಲ್ಲಿ ೪ ಟಿಎಂಸಿ ನೀರು ಸಂಗ್ರಹವಾಗಿದೆ.
ಇದೇ ರೀತಿ ನೀರಿನ ಒಳ ಹರಿವು ಬಂದರೆ ಈ ವಾರದಲ್ಲೆ ಜಲಾಶಯ ಬಹುತೇಕ ಭರ್ತಿಯಾಗಲಿದೆ. ಇಂದರಿಂದಾಗಿ ನಾಲ್ಕು ಜಿಲ್ಲೆಗಳಿಗೆ ಮಾತ್ರವಲ್ಲ ಆಂಧ್ರಪದೇಶದ ರೈತರಿಗೂ ಅನುಕೂಲವಾಗಲಿದೆ. ಈ ಜಲಾಶಯದ ನೀರನ್ನ ಕೇವಲ ಕೃಷಿ ಚಟುವಟಿಕೆಗೆ ಮಾತ್ರ ಬಳಕೆ ಮಾಡುತ್ತಿಲ್ಲ. ನಾಲ್ಕು ಜಿಲ್ಲೆಯ ಜನರು ಕುಡಿಯಲು ಈ ನೀರನ್ನ ಬಳಕೆ ಮಾಡುತ್ತಿದ್ದಾರೆ.
ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…