Mysore
24
broken clouds

Social Media

ಶುಕ್ರವಾರ, 21 ಆಗಸ್ಟ್ 2026
Light
Dark

ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರ್ನಾಟಕ ಕರಾವಳಿ ಸೇರಿದಂತೆ ಹಲವು ಸಮುದ್ರ ಪ್ರದೇಶಗಳಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಿದ್ದು, ಸೊಮಾಲಿಯಾ ಕರಾವಳಿ ಭಾಗದಲ್ಲಿ ಗಾಳಿಯ ವೇಗ 65 ಕಿ.ಮೀ ತಲುಪುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ, ಕೇರಳ ಕರಾವಳಿ, ಲಕ್ಷದ್ವೀಪ, ಮಾಲ್ಡೀವ್ಸ್‌, ಕೊಮೊರಿನ್‌ ಪ್ರದೇಶಗಳಿಗೆ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಬಂಗಾಳಕೊಲ್ಲಿ, ಮನ್ನಾರ್‌ ಕೊಲ್ಲಿ, ಅಂಡಮಾನ್‌ ಸಮುದ್ರ ಭಾಗದಲ್ಲೂ ಮುಂದಿನ ಐದು ದಿನ ಪ್ರಕ್ಷುಬ್ಧ ವಾತಾವರಣ ಇರಲಿದ್ದು, ಶ್ರೀಲಂಕಾ ಕರಾವಳಿ ಹಾಗೂ ನೈಋತ್ಯ ಬಂಗಾಳಕೊಲ್ಲಿಯಲ್ಲಿ ಗಂಟೆಗೆ 65 ಕಿ.ಮೀ ವೇಗದಲ್ಲಿ ಗಾಳಿ ಅಪ್ಪಳಿಸಲಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

 

Tags:
error: Content is protected !!