ರಾಜ್ಯ

ಧರ್ಮಸ್ಥಳ ಪ್ರಕರಣಕ್ಕೆ ಟ್ವಿಸ್ಟ್: ತಿಮರೋಡಿ ಮನೆಯಲ್ಲಿ ಚಿನ್ನಯ್ಯ ಮಾತುಕತೆ ವಿಡಿಯೋ ವೈರಲ್‌

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಸಂಬಂಧ ಮಹೇಶ್‍ಶೆಟ್ಟಿ ತಿಮರೋಡಿ ಆರೋಪಿ ಚಿನ್ನಯ್ಯನ ಜೊತೆ ಮಾತನಾಡಿದ್ದ ವಿಡಿಯೋವೊಂದನ್ನು ಬಿಡುಗಡೆ ಮಾಡಲಾಗಿದೆ. ಇದೀಗ ಅದರ ಮುಂದುವರಿದ ಭಾಗ ಬಹಿರಂಗಗೊಂಡಿದೆ.

ದೂರುದಾರ ಚಿನ್ನಯ್ಯ, ಸೌಜನ್ಯಳ ಹೋರಾಟಗಾರರನ್ನು ಭೇಟಿ ಮಾಡಿದ ವೇಳೆ ಮಾತಾಡಿದ್ದಾರೆ ಎನ್ನಲಾಗಿರುವ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. 2 ನಿಮಿಷಗಳ 2ನೇ ವಿಡಿಯೋದಲ್ಲಿ ಕೆಲವು ಸ್ಫೋಟಕ ಮಾಹಿತಿ ಹೊರ ಬಿದ್ದಿದೆ. ಮಹೇಶ್ ತಿಮರೋಡಿ ಮನೆಯಲ್ಲಿ ಚಿನ್ನಯ್ಯ ಮಾತುಕತೆ ನಡೆಸಿದ ವಿಡಿಯೋ ಇದಾಗಿದೆ.

ಕಳೆದ 2023ರ ಆಗಸ್ಟ್‌ನಲ್ಲಿ ಈ ವಿಡಿಯೋ ಮಾಡಲಾಗಿದ್ದು, ಚಿನ್ನಯ್ಯ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಮೊದಲ ಬಾರಿಗೆ ಭೇಟಿ ನೀಡಿದ್ದ ವೇಳೆ ಈ ವಿಡಿಯೋ ರೆಕಾರ್ಡ್ ಮಾಡಲಾಗಿದೆ ಎನ್ನಲಾಗಿದೆ.

ವಿಡಿಯೋದಲ್ಲಿ ಆರೋಪಿ ಚಿನ್ನಯ್ಯ ಸ್ಟಾಟ್ ನಂ.17ರ ಬಗ್ಗೆ ಮಾತನಾಡಿದ್ದಾನೆ. ಗೊಮ್ಮಟ ಬೆಟ್ಟದಿಂದ ಬರುವ ಫಸ್ಟ್ ಟರ್ನ್‍ನಲ್ಲಿ ಏನಿಲ್ಲ ಅಂದ್ರೂ 70ಕ್ಕೂ ಹೆಚ್ಚು ಹೆಣ ಹೂತು ಹಾಕಿದ್ದೇನೆ. ಅದು ಸ್ಮಶಾನ ಅಲ್ಲ, ಬಸ್ ಸ್ಟ್ಯಾಂಡ್‍ನಿಂದ ತರಕಾರಿ ತೆಗೆದುಕೊಂಡು ಹೋಗುವ ಗಾಡಿಯಲ್ಲಿ ಹೆಣ ತಂದು ಹೂತು ಹಾಕುತ್ತಿದ್ದೆ. ಯಾವ ನೆಲ ಒಣಗಿರುತ್ತೋ ಅದನ್ನು ತೆಗೆದು ಹೂತು ಹಾಕುತ್ತಿದ್ದೆ. ಇನ್ನೂ ನೇತ್ರಾವತಿ ತೀರದಲ್ಲಿ ಹೆಣ ಹೂತುಹಾಕಿದ್ದಕ್ಕೆ ಲೆಕ್ಕವೇ ಇಲ್ಲ.

ಪ್ರಾಥಮಿಕ ಶಾಲೆಯ ಹಿಂಭಾಗದ ಭಟ್ರ ಮನೆಯ ಬಾವಿಯಲ್ಲಿ ಒಂದು ಹೆಣ ಸಿಕ್ಕಿತ್ತು. ಅಲ್ಲಿ ಏನಾಯ್ತು ಅಂತಾ ಗೊತ್ತಿಲ್ಲ. ನೇತ್ರಾವತಿಯಲ್ಲಿ ಒಂದು ಹೆಣ ತೆಗೆದಿದ್ದೆ. ಅದೇ ದಿನ ಪೊಲೀಸರು ನನ್ನನ್ನು ಭಟ್ರ ಮನೆಗೆ ಕರೆದುಕೊಂಡು ಹೋದರು. ಅಲ್ಲಿ ಕೇಳಿದ್ರೆ ಹುಡುಗಿ ಫೇಲ್ ಆಗಿದ್ದಕ್ಕೆ ಬಾವಿಗೆ ಹಾರಿದ್ದಳು ಎಂದಿದ್ದರು. ನಾನು ಹೆಣ ಮೇಲೆ ಹಾಕಿ ವಾಪಸ್ ಬಂದೆ. ಜೊತೆಗೆ ಬಿಳಿ ಸೀರೆಯ ಕೇರಳ ಮೂಲದ ಹೆಂಗಸಿನ ಹೆಣವೊಂದನ್ನು ಹೂತು ಹಾಕಿದ್ದೇನೆ ಎಂದಿದ್ದಾನೆ.

ಗೊಮ್ಮಟ ಬೆಟ್ಟದಿಂದ ಬರುವ ಫಸ್ಟ್ ಟರ್ನ್‌ನಲ್ಲಿ ಏನಿಲ್ಲ ಅಂದ್ರೂ 70ಕ್ಕೂ ಹೆಚ್ಚು ಹೆಣ ಹೂತು ಹಾಕಿದ್ದೇನೆ ಎಂದಿದ್ದಾನೆ. ಆ ಟರ್ನ್ ನಲ್ಲಿ ಬಿಳಿ ಸೀರೆಯ ಕೇರಳ ಮೂಲದ ಹೆಂಗಸಿನ ಹೆಣ ಹೂತು ಹಾಕಿದ್ದೇನೆ ಎಂದು ಆತ ಹೇಳಿದ್ದಾನೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಾರ್ಥಕ ಬದುಕಿನ ಸಾಧಕ!

ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…

22 hours ago

ಓದುಗರ ಪತ್ರ: ಕಲಬೆರಕೆ ಮಾಫಿಯಾ: ಕ್ರಮ ಅಗತ್ಯ

ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…

22 hours ago

ಓದುಗರ ಪತ್ರ: ಉದ್ಯಾನವನಗಳಲ್ಲಿ ಸಂಗೀತ ವಾದ್ಯ ಜೋಡಣೆ: ಪಾಲಿಕೆ ಕ್ರಮ ಅಭಿನಂದನಾರ್ಹ

ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…

22 hours ago

ಮೀಸಲಾತಿ ವಿರೋಧಿ ದನಿಗೆ ಮೋದಿ ಮಣಿಯುವರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…

22 hours ago

ಕುಕ್ಕರಿನ ಸೀಟಿ ಕೂಗಲು ಶುರುವಾಗಿದೆ!

ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…

23 hours ago

ಕೆಲವಷ್ಟು ಭರವಸೆಗಳು ಮತ್ತು ಹಲವಷ್ಟು ಆತಂಕಗಳು

ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…

23 hours ago