ಶಿರಸಿ : ಇಲ್ಲಿನ ಯಲ್ಲಾಪುರದಲ್ಲಿ ನಡೆದ ವಿವಾಹಿತೆ ರಂಜಿತಾ ಹತ್ಯೆ ಕೇಸ್‌ಗೆ ಬಿಗ್ ಟ್ವೀಸ್ಟ್ ಸಿಕ್ಕಿದ್ದು, ಹತ್ಯೆ ಆರೋಪಿ ರಫೀಕ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಮಾಹಿತಿ ತಿಳಿದು ಬಂದಿದೆ.
ವಿವಾಹಿತೆ ರಂಜಿತಾ ಹತ್ಯೆಗೆ ರಾಜ್ಯಾದ್ಯಂತ ಹಿಂದೂಪರ ಸಂಘಟನೆಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದವು. ಆರೋಪಿಯನ್ನು ತಕ್ಷಣ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದವು. ಆದರೆ ಇದೀಗ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಆರೋಪಿ ಯಲ್ಲಾಪುರದ ರಾಮಾಪುರ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಮೂವತ್ತು ವರ್ಷದ ರಫೀಕ್ ಕಾಡಿನಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಆತನ ದೇಹ ಪತ್ತೆಯಾಗಿದೆ.




