ಬೆಂಗಳೂರು: ಕೊಪ್ಪಳದಲ್ಲಿ ಇಸ್ರೇಲ್ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ನಡೆದಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ.
ಈ ಕುರಿತು ತಮ್ಮ ನಿವಾಸದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾರ್ಚ್.6ರಂದು ನಾಲ್ವರು ತುಂಗಭದ್ರಾ ನದಿ ಸಮೀಪದ ಹೋಮ್ ಸ್ಟೇನಲ್ಲಿ ಉಳಿದುಕೊಂಡಿದ್ದರು. ಅದರಲ್ಲಿ ಇಬ್ಬರು ವಿದೇಶಿಯರು, ಇಬ್ಬರು ಭಾರತೀಯರಿದ್ದರು.
ಅವರೆಲ್ಲಾ ಊಟ ಮಾಡಿದ ಬಳಿಕ ನಕ್ಷತ್ರ ವೀಕ್ಷಣೆಗೆ ತುಂಗಭದ್ರಾ ಎಡದಂಡೆ ನಾಲೆಯ ಬಳಿ ಹೋಗಿದ್ದರು. ಈ ವೇಳೆ ಮೂವರು ವ್ಯಕ್ತಿಗಳು ಮೋಟಾರ್ ಬೈಕಿನಲ್ಲಿ ಅಲ್ಲಿಗೆ ಬಂದು, ಪೆಟ್ರೋಲ್ ಸಿಗುತ್ತಾ ಎಂದು ಹೇಳಿ ಇಸ್ರೇಲ್ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ಎಸಗಿದ್ದಾರೆ.
ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಮೂರನೇ ಆರೋಪಿ ಇನ್ನೂ ಸಿಕ್ಕಿಲ್ಲ. ಶೋಧ ನಡೆಯುತ್ತಿದೆ ಎಂದು ಹೇಳಿದರು.





